ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ:ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಚಿನ್ನ ವಶ

ನ.16ರಂದು ಕೊಲಂಬದಿಂದ ಇಬ್ಬರು ಮಹಿಳೆಯರು‌ ಹಾಗೂ ಬ್ಯಾಂಕಾಕ್‌ನಿಂದ ಮೂವರು ಪುರುಷರು ಬೆಂಗಳೂರಿಗೆ ಶರ್ಟ್ ಹಾಗೂ ಒಳ ಉಡುಪುಗಳಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನ ಪತ್ತೆ ಮಾಡಿರುವ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು.

ಬಂಧಿತರಿಂದ 58,39,806 ಲಕ್ಷ ಮೌಲ್ಯದ 966 ಗ್ರಾಂ ಚಿನ್ನದ ಸರಗಳ ಕಟ್ ಪೀಸ್ ಗಳನ್ನ ವಶಕ್ಕೆ ಪಡೆಯಲಾಗಿದೆ.

ಅದೇರೀತಿ ನ.17ರಂದು ಮಸ್ಕತ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಏರ್ ಕಸ್ಟಮ್ಸ್‌ನ ಅಧಿಕಾರಿಗಳು ತಡೆಹಿಡಿದು ತಪಾಸಣೆ ನಡೆಸಿದಾಗ 68,18,812 ಮೌಲ್ಯದ 1113.07ಗ್ರಾಂ ಚಿನ್ನ ಪತ್ತೆಯಾಗಿದೆ.

ಪ್ರಯಾಣಿಕ ಸೊಂಟದ ಬೆಲ್ಟ್ ಪೌಚ್‌ನಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳಸಾಗಣೆ ಮಾಡುತ್ತಿರುವುದನ್ನ ಪತ್ತೆ ಮಾಡಲಾಗಿದೆ.

ಸದ್ಯ ಬಂಧಿತರನ್ನ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ, ತನಿಖೆ ಮುಂದುವರಿಸಿದ್ದಾರೆ.

ಇಂದು ಸಹ AI ಎಕ್ಸ್‌ಪ್ರೆಸ್ IX 814 ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಯಾಣಿಕನನ್ನ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ 51.8ಲಕ್ಷ ಮೌಲ್ಯದ 857ಗ್ರಾಂ ಚಿನ್ನವನ್ನ ಚೆಕ್ ಇನ್ ಬ್ಯಾಗೇಜ್ ನಲ್ಲಿ ಕಾರ್ ಸ್ಪೀಕರ್, ಏರ್ ಪಾಡ್, ಪವರ್ ಅಡಾಪ್ಟರ್ ನಲ್ಲಿ ಮರೆಮಾಚಿ ಅಕ್ರಮ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನ ಬಂಧಿಸಿ ವಿಚಾರಣೆ ಮುಂದುವರಿಸಲಾಗಿದೆ.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

11 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

12 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

15 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

24 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago