ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ: ಅಪಾರ ಮೌಲ್ಯದ ಚಿನ್ನ ವಶ

ಫೆ.23ರಂದು ಕೊಲಂಬೊದಿಂದ ಆಗಮಿಸಿದ ಒಬ್ಬ ಅಂತಾರಾಷ್ಟ್ರೀಯ ಪ್ರಯಾಣಿಕ ಮತ್ತು ಇನ್ನೊಬ್ಬ ದೇಶೀಯ ಪ್ರಯಾಣಿಕ‌ ಸೇರಿ 18,47,688ರೂ. ಮೌಲ್ಯದ 288.54 ಗ್ರಾಂ ತೂಕದ‌ ವಿದೇಶಿ ಮೂಲದ ಚಿನ್ನವನ್ನು ಅರೆ-ಘನ ಪೇಸ್ಟ್ ರೂಪದಲ್ಲಿ ಗೋವಾದಿಂದ ಆಗಮಿಸುವ ದೇಶೀಯ ಪ್ರಯಾಣಿಕರಿಗೆ ಹಸ್ತಾಂತರಿಸುವ ಮೂಲಕ ಕಳ್ಳಸಾಗಣೆ ಮಾಡಲು ಪ್ರಯತ್ನಿಸುವ ವೇಳೆ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಅದೇರೀತಿ ಫೆ.24ರಂದು ಒಬ್ಬ ಶ್ರೀಲಂಕಾ ಮೂಲದ ಪ್ರಯಾಣಿಕ ಹಾಗೂ ಇಬ್ಬರು ಭಾರತೀಯ ನಾಗರಿಕರು ಸೇರಿ ವಿದೇಶಿ ಮೂಲದ 54,02,525 ಮೌಲ್ಯದ 878.98 ಗ್ರಾಂ. ಚಿನ್ನವನ್ನು ಕಚ್ಚಾ ರೂಪದಲ್ಲಿ ರಹಸ್ಯವಾಗಿ ಸಾಗಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಬೆಳಕಿಗೆ ಬಂದಿದೆ.

ಕೂಡಲೇ ಆರೋಪಿಗಳನ್ನ ವಶಕ್ಕೆ ಪಡೆದು ತನಿಖೆಯನ್ನ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

2 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

2 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

14 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago