ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರು ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ ಸ್ವೀಕರಿಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ಸರ್ಕಾರದ ಆದೇಶ ಹೊರಬಿದ್ದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಹಿತೇಂದ್ರ ಅವರಿಗೆ ಸೀಮಂತ್ ಕುಮಾರ್ ಸಿಂಗ್ ಅವರು ಅಧಿಕಾರ ಹಸ್ತಾಂತರಿಸಿದರು.
ಬೆಂಗಳೂರಿನಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಮಾದರಿ ನಾಯಕತ್ವ ನೀಡಿ, ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ ಪೊಲೀಸ್ ಇಲಾಖೆಗೆ ಗಣನೀಯ ಕೊಡುಗೆ ನೀಡಿದ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಕೃತಜ್ಞತೆ ಸಲ್ಲಿಸಿದೆ. ಅಲ್ಲದೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅವರ ಮುಂದಿನ ಜವಾಬ್ದಾರಿಗೆ ಶುಭ ಹಾರೈಸಿದೆ.
ಇದೇ ವೇಳೆ ನೂತನ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರನ್ನು ಆತ್ಮೀಯವಾಗಿ ಸ್ವಾಗತಿಸಿರುವ ಇಲಾಖೆ, ಅವರ ನಾಯಕತ್ವದಲ್ಲಿ ಸಾರ್ವಜನಿಕ ಸುರಕ್ಷತೆ, ಪರಿಣಾಮಕಾರಿ ಪೊಲೀಸ್ ಸೇವೆ ಹಾಗೂ ನಾಗರಿಕ ಕೇಂದ್ರಿತ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಆದ್ಯತೆ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದೆ.
ದೊಡ್ಡಬಳ್ಳಾಪುರ: ಜೆಸಿಬಿ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾರಸಿಂಹನಹಳ್ಳಿ…
ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದು ಸಂಪೂರ್ಣ ತಪ್ಪು ಕಲ್ಪನೆ. ಕಾಯ್ದೆಯ ಚೌಕಟ್ಟಿನಲ್ಲೇ ಅನುದಾನ…
ರಾಜ್ಯದ ರೈತರಿಗೆ 5 ಸಾವಿರ ರೂ. ಬರ ಪರಿಹಾರ ನೀಡಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣ ಹೆಚ್ಚುವರಿ ಪರಿಹಾರವನ್ನು…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ನೇಗಿಲ ಯೋಗಿ ಯೋಜನೆಗೆ ಚಾಮರಾಜನಗರ, ಗುಂಡ್ಲುಪೇಟೆ ಆಯ್ಕೆಯಾಗಿದ್ದು, ಮುಂಗಾರಿಗೂ ಮೊದಲೇ ರೈತರಿಗೆ ಯೋಜನೆ ಕುರಿತು ವ್ಯಾಪಕ…
ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ…
ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…