ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ನಡೆದ ನೀಟ್ (NEET) ಮರು ಪರೀಕ್ಷೆ ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯಾದ್ಯಂತ 2,536 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 838 ಮಂದಿ ಗೈರಾಗಿದ್ದಾರೆ.
ದೊಡ್ಡಬಳ್ಳಾಪುರದ 4 ಹಾಗೂ ದೇವನಹಳ್ಳಿಯ 4 ಪರೀಕ್ಷಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 8 ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಿತು.
ಜಿಲ್ಲೆಯಲ್ಲಿ ಒಟ್ಟು 3,374 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ 2,536 ಮಂದಿ ಪರೀಕ್ಷೆ ಬರೆದಿದ್ದಾರೆ.
ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಮತ್ತು ಸಂಬಂಧಿತ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದವು. ಎಲ್ಲಾ ಕೇಂದ್ರಗಳಲ್ಲಿಯೂ ಪರೀಕ್ಷೆ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟುನಿಟ್ಟಿನ ಭದ್ರತೆ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಮರು ಪರೀಕ್ಷೆಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಗ್ರೇಡ್-1 ಸರ್ಕಾರಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿತ್ತು. ಅಭ್ಯರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ದಾಖಲೆಗಳ ಪರಿಶೀಲನೆಯ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ನೀಡಲಾಯಿತು.
ಇದಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಪಾರದರ್ಶಕತೆ ಹಾಗೂ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ನಿರಂತರ ನಿಗಾವಹಿಸಿ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…