ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ 648ರ ದೇವನಹಳ್ಳಿ ಹೊರವಲಯದಲ್ಲಿ ನಿಂತಿದ್ದ ಕಂಟೈನರ್‌ಗೆ ಹಿಂದಿನಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಮೂಲದ ಜಡಿಯಪ್ಪ (30) ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮೂವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಮೂಗೇನಹಳ್ಳಿ ಗೇಟ್ ಸಮೀಪ ಮತ್ತೊಂದು ಅಪಘಾತ ಸಂಭವಿಸಿದೆ. ದಾಬಸ್‌ಪೇಟೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಿಡವಂದ ಗ್ರಾಮದ ನಿವಾಸಿ ಕಾರ್ತಿಕ್ (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ವಾಹನ ಜಖಂಗೊಂಡಿದ್ದು, ಗಾಯಗೊಂಡವರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ಕಾರ್ತಿಕ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಒಂದೇ ಜಿಲ್ಲೆಯ ಎರಡು ಪ್ರತ್ಯೇಕ ಹೆದ್ದಾರಿ ಅಪಘಾತಗಳಲ್ಲಿ ಇಬ್ಬರು ಯುವಕರು ಮೃತಪಟ್ಟಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

3 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

5 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

8 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

9 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

16 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

16 hours ago