ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ದೊಡ್ಡಬಳ್ಳಾಪುರ ತಾಲೂಕಿನ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯನಾದ ತಾಲೂಕಿನ ರಾಮಯ್ಯನ ಪಾಳ್ಯ ಗ್ರಾಮದ ನಾಗೇಶ್ ಎಂ ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ಎಂ ಅವರನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದ್ದಾರೆ.
ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ ನೀಡಿದೆ. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ನೂತನವಾಗಿ ಆಯ್ಕೆಯಾದ ನಾಗೇಶ್ ಎಂ ಅವರು ಹೇಳಿದ್ದಾರೆ.
ನನ್ನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್ ಉಪಾಧ್ಯಕ್ಷನನ್ನಾಗಿ ಆಯ್ಕೆ ಮಾಡಿದಂತಹ ಎಲ್ಲರಿಗೂ ಧನ್ಯವಾದ. ಜನ ಸೇವೆಯೇ ಜನಾರ್ದನ ಸೇವೆ ಎಂಬಂತೆ ಜನರ ಕಷ್ಟಗಳಿಗೆ ಶೀಘ್ರವಾಗಿ ಸ್ಪಂದಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದರು.