ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್‌ನಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಜಿಲ್ಲೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಅಂತಹ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಇತರೆ ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.
Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು.
ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.
ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…