ಬೆಂಗಳೂರು: ಕರ್ನಾಟಕದ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಎಂದು ಮರು ನಾಮಕರಣ ಮಾಡಲು ನಿರ್ಧರಿಸಲಾಗಿದೆ.
ಕೆಲ ತಿಂಗಳ ಹಿಂದೆ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೆಪಲ್ಲಿಗೆ ಭಾಗ್ಯನಗರ, ಬೆಂಗಳೂರು ಗ್ರಾಮಾಂತರಕ್ಕೆ ಬೆಂಗಳೂರು ಉತ್ತರ ಎಂದು ಮರು ನಾಮಕರಣ ಮಾಡಲಾಗಿದೆ.