ಮಾದಕವಸ್ತು ಕಳ್ಳಸಾಗಣೆ ವಿರುದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಅಬಕಾರಿ ಇಲಾಖೆ ವತಿಯಿಂದ ವಿವಿಧ ಕಡೆಗಳಲ್ಲಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸಿ ಒಟ್ಟು 03 ಎನ್.ಡಿ.ಪಿ.ಎಸ್ ಪ್ರಕರಣಗಳನ್ನು ದಾಖಲಿಸಲಾಗಿದೆ.
3 ಪ್ರಕರಣಗಳಲ್ಲಿ ಒಟ್ಟು 11.357 ಕೆ.ಜಿ ಪ್ರಮಾಣದ ಗಾಂಜಾವನ್ನು ಇಲಾಖಾ ವಶಕ್ಕೆ ಪಡೆಯಲಾಗಿದ್ದು, ಇದರಲ್ಲಿ ಹೊಸಕೋಟೆ ವಲಯದ ಅಬಕಾರಿ ಉಪ ನಿರೀಕ್ಷಕರು ದೊಡ್ಡದುನ್ನಸಂದ್ರದಿಂದ ಅನುಗೊಂಡನಹಳ್ಳಿ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಸುಹೇಲ್ ಅಹಮ್ಮದ್ ಬಿನ್ ಹುಸೇಲ್ ಅಹಮ್ಮದ್ ಎಂಬ ವ್ಯಕ್ತಿ 0.929 ಕೆ.ಜಿ. ಗಾಂಜಾವನ್ನು ಸಾಗಿಸುತ್ತಿದ್ದಾಗ ಆರೋಪಿಯನ್ನು ಹಿಡಿದು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ ವಲಯದ ಅಬಕಾರಿ ವಲಯದ ನಿರೀಕ್ಷಕರು, ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-04, ಪೋಲ್ ನಂ.ಡಿಬಿಯು-1032 ರ ಬಳಿ 4.14 ಕೆ.ಜಿ ರಷ್ಟು ಗಾಂಜಾವನ್ನು ಸಾಗಾಣಿಕೆ ಮಾಡುವ ಸಮಯದಲ್ಲಿ ಜಪ್ತು ಪಡಿಸಿದ್ದು, ಆರೋಪಿ ಪರಾರಿಯಾಗಿರುತ್ತಾನೆ, ತನಿಖೆ ಪ್ರಗತಿಯಲ್ಲಿದೆ.
ಉಳಿದಂತೆ ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕರು, ದೇವನಹಳ್ಳಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-01 ರಲ್ಲಿ 6.288 ಕೆ.ಜಿ ರಷ್ಟು ಗಾಂಜಾವನ್ನು ಚೀಲದಲ್ಲಿ ಸಾಗಾಣಿಕೆ ಮಾಡುವ ಸಮಯದಲ್ಲಿ ಹಿಡಿದಿರುತ್ತಾರೆ. ಆರೋಪಿ ಪರಾರಿಯಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…