
ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಪ್ರಕಟಿಸಿದ್ದು, ಒಟ್ಟು 71 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿ. ಕೆಂಪಣ್ಣ, ವಿ. ಮುರುಳಿ ಹಾಗೂ ಅಶೋಕ್ ಅವರು ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿದೆ. ಜಿಲ್ಲೆಯ ಮೂವರು ಸಾಧಕರಿಗೆ ಪ್ರಶಸ್ತಿ ಲಭಿಸಿರುವುದು ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.