ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಗೌರವಾನ್ವಿತ ಕೆ.ಎನ್. ಫಣೀಂದ್ರ ಅವರು 2023 ರ ಆಗಸ್ಟ್ 05 ರಿಂದ 08 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು, ದೂರು/ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಮಾಡಲಿದ್ದಾರೆ.
2023 ರ ಆಗಸ್ಟ್ 05 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 01:30 ಗಂಟೆಯವರೆಗೆ ವರೆಗೆ ಮತ್ತು ಮಧ್ಯಾಹ್ನ 2:30 ಗಂಟೆಯಿಂದ ರಿಂದ 5:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ನಂತರ ಸಂಜೆ 5:30 ಗಂಟೆಯಿಂದ 6:30 ಗಂಟೆಯವರೆಗೆ ಕರ್ನಾಟಕ ರಾಜ್ಯ ಮಟ್ಟದ ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕರ್ನಾಟಕ ಸಾಕ್ಷರತೆ ಯೋಜನೆಯ ಕುರಿತು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಆಗಸ್ಟ್ 6 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 1:00 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳ ಜೊತೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಪ್ರಾಧಿಕಾರದ ಪಾತ್ರ ಕುರಿತ ಸಭೆಯನ್ನು ಸಿಟಿ ಸಿವಿಲ್ ಕೋರ್ಟ್ ನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:15 ಗಂಟೆಯಿಂದ 12:30 ಗಂಟೆಯವರೆಗೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜೊತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4:00 ಗಂಟೆಗೆ ಜಿಲ್ಲೆಯ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 7 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:00 ಗಂಟೆಯಿಂದ 1:30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2:30 ಗಂಟೆಯಿಂದ 4:30 ಗಂಟೆಯವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ನಡೆಸಲಾಗುತ್ತದೆ.
ಆಗಸ್ಟ್ 7 ರ ಬಾಕಿ ಪ್ರಕರಣಗಳನ್ನು ಆಗಸ್ಟ್ 8 ರಂದು ಬೆಳಗ್ಗೆ 10:00 ಗಂಟೆಯಿಂದ ಪ್ರಕರಣಗಳು ಮುಕ್ತಾಯ ಆಗುವವರೆಗೂ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…