ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಸ್ಟ್ 5 ರಿಂದ 8 ರವರೆಗೆ ಉಪಲೋಕಾಯುಕ್ತರ ಪ್ರವಾಸ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಗೌರವಾನ್ವಿತ ಕೆ.ಎನ್. ಫಣೀಂದ್ರ ಅವರು 2023 ರ ಆಗಸ್ಟ್ 05 ರಿಂದ 08 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು, ದೂರು/ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಮಾಡಲಿದ್ದಾರೆ.

2023 ರ ಆಗಸ್ಟ್ 05 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 01:30 ಗಂಟೆಯವರೆಗೆ ವರೆಗೆ ಮತ್ತು ಮಧ್ಯಾಹ್ನ 2:30 ಗಂಟೆಯಿಂದ ರಿಂದ 5:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ನಂತರ ಸಂಜೆ 5:30 ಗಂಟೆಯಿಂದ 6:30 ಗಂಟೆಯವರೆಗೆ ಕರ್ನಾಟಕ ರಾಜ್ಯ ಮಟ್ಟದ ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕರ್ನಾಟಕ ಸಾಕ್ಷರತೆ ಯೋಜನೆಯ ಕುರಿತು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಆಗಸ್ಟ್ 6 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 1:00 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳ ಜೊತೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಪ್ರಾಧಿಕಾರದ ಪಾತ್ರ ಕುರಿತ ಸಭೆಯನ್ನು ಸಿಟಿ ಸಿವಿಲ್ ಕೋರ್ಟ್ ನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:15 ಗಂಟೆಯಿಂದ 12:30 ಗಂಟೆಯವರೆಗೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜೊತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4:00 ಗಂಟೆಗೆ ಜಿಲ್ಲೆಯ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ‌.

ಆಗಸ್ಟ್ 7 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:00 ಗಂಟೆಯಿಂದ 1:30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2:30 ಗಂಟೆಯಿಂದ 4:30 ಗಂಟೆಯವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ನಡೆಸಲಾಗುತ್ತದೆ.

ಆಗಸ್ಟ್ 7 ರ ಬಾಕಿ ಪ್ರಕರಣಗಳನ್ನು ಆಗಸ್ಟ್ 8 ರಂದು ಬೆಳಗ್ಗೆ 10:00 ಗಂಟೆಯಿಂದ ಪ್ರಕರಣಗಳು ಮುಕ್ತಾಯ ಆಗುವವರೆಗೂ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

10 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

20 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago