ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವೈದ್ಯಾಧಿಕಾರಿ (ಡಿಎಚ್ಒ) ಸುನೀಲ್ ಕುಮಾರ್ ಮನೆ ಮತ್ತು ಕಚೇರಿ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆದಿದೆ.
ಬೆಂಗಳೂರು ನಗರದ ಬಸವೇಶ್ವರ ನಗರದ ನಿವಾಸ ಹಾಗೂ ಬೆಂ.ಗ್ರಾ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಮೇಲೆ ರೈಡ್ ಮಾಡಿ ಕಡತಗಳನ್ನು ಪರಿಶೀಲನೆ ನಡೆಸಲಾಗಿದೆ.
8 ಮಂದಿ ಲೋಕಾಯುಕ್ತ ಅಧಿಕಾರಿಗಳಿಂದ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.