
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ನೇಮಕವಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ಶಿವಶಂಕರ್ ಅವರು ಬೆಸ್ಕಾಂ ಎಂಡಿಯಾಗಿ ವರ್ಗಾವಣೆಗೊಂಡಿದ್ದರು.

ಈ ಹಿನ್ನೆಲೆ ನೂತನ ಜಿಲ್ಲಾಧಿಕಾರಿ ನೇಮಕವಾಗುವವರೆಗೆ ಪ್ರಭಾರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್.ಅನುರಾಧ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಬಸವರಾಜು ಎ.ಬಿ ಅವರು ಸರ್ಕಾರದ ಉಪ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಡಿಸಿಯಾಗಿ ವರ್ಗಾವಣೆಗೊಂಡಿದ್ದಾರೆ.