
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಎ.ಬಿ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ನೇಮಿಸಿ ಫೆ.03 ರಂದು ಸರ್ಕಾರ ಆದೇಶ ಹೊರಡಿಸಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರ್‌ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.