ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಹಾಗೂ ಸ್ಥಳೀಯ ಆಡಳಿತ ಸಹಯೋಗದಲ್ಲಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ನಲ್ಲಿ ಹಾಗೂ ಬೂದಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರಿಗೆ ಮಾಹಿತಿ ನೀಡುವ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ, ಸದೃಢರನ್ನಾಗಿ ಮಾಡಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಐದು ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದವರ ಜೀವನ ಸುಧಾರಣೆ ಆಗಿದೆ, ಆರ್ಥಿಕವಾಗಿ ಸಬಲರಾಗಿದ್ದಾರೆ, ಆಗುತ್ತಿದ್ದಾರೆ ಎಂದು ಸಚಿವರು ಹೇಳಿದರು.
ಉಚಿತ ಬೆಳಕು ಸುಸ್ಥಿರ ಬದುಕು ಗೃಹಜ್ಯೋತಿಯ ಉದ್ದೇಶವಾಗಿದ್ದು ಜಿಲ್ಲೆಯಲ್ಲಿ 3,54,304 ಗ್ರಾಹಕರು ನೋಂದಾಯಿಸಿಕೊಂಡಿದ್ದ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಹಸಿವು ಮುಕ್ತ ಕರ್ನಾಟಕ ಮಾಡುವ ಹಿತದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,99, 979 ಅರ್ಹ ಫಲಾನುಭವಿಗಳಿಗೆ 11, 67,01,940 ರೂ ಗಳ ಹಣವನ್ನು ಡಿ.ಬಿ.ಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.
ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯಿಂದ ದೇವನಹಳ್ಳಿ ತಾಲ್ಲೂಕಿನಲ್ಲಿ ಬಿ.ಎಂ.ಟಿ.ಸಿ ಯಲ್ಲಿ ಯೋಜನೆ ಪ್ರಾರಂಭದಿಂದ ಇಲ್ಲಿಯ ತನಕ ಸುಮಾರು 6,91,292 ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಮೂಲಕ ಯೋಜನೆಯ ಲಾಭವನ್ನು ಪಡೆದುಕೊಂಡು ಇರುತ್ತಾರೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 2,01,781 ಫಲಾನುಭವಿಗಳು ನೋಂದಣಿಯಾಗಿದ್ದು ಫಲಾನುಭವಿಗಳ ಕುಟುಂಬಕ್ಕೆ ಮಾಸಿಕವಾಗಿ 2000 ರೂಗಳು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿರುತ್ತದೆ ಎಂದರು.
ಯುವನಿಧಿ ಯೋಜನೆಯು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಪದವಿ ಮುಗಿಸಿ 180 ದಿನಗಳು ಆದರೂ ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಮಾಸಿಕರು 3000 ಮತ್ತು ಡಿಪ್ಲೋಮಾ ಪದವೀಧರರಿಗೆ ಮಾಸಿಕ ರೂ 1500 ಗಳನ್ನು 24 ತಿಂಗಳ ಅವರಿಗೆ ನೀಡುವ ಯೋಜನೆಯಾಗಿದೆ ಈ ಯೋಜನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1591 ನಿರುದ್ಯೋಗಿಗಳು ನೋಂದಣಿಯಾಗಿದ್ದು ಇವರ ಬ್ಯಾಂಕ್ ಖಾತೆಗಳಿಗೆ ಅನುದಾನ ವರ್ಗಾಯಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳಡಿ ಜಿಲ್ಲೆಯಲ್ಲಿ 17.57 ಲಕ್ಷ ಫಲಾನುಭವಿಗಳು ಇದರ ಲಾಭ ಪಡೆದಿದ್ದು , 663.36 ಕೋಟಿ ರೂ ಗಳನ್ನು ವೆಚ್ಚ ಮಾಡಲಾಗಿದೆ ಎಂದು ಸಚಿವರು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಹಾಗೂ ಜನರಿಗೆ ಸೌಲಭ್ಯ ಮಾಹಿತಿ ನೀಡಲು ಪ್ರತಿ ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಸಮಾವೇಶ ಮಾಡಲಾಗುವುದು. ಅಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆಗಳನ್ನು ಕಡ್ಡಾಯವಾಗಿ ಜನತೆಗೆ ತಲುಪಿಸಬೇಕು. ಪಂಚ ಯೋಜನೆಗಳಿಂದ ಜನ ವಂಚಿತರಾದರೆ ಸಂಬಂಧಿಸಿದ ಇಲಾಖೆ ಅಧಿಕಾರಿಯೇ ಹೊಣೆ. ಯೋಜನೆ ತಲುಪದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಸೂಕ್ತ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಮಾವೇಶದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಪ್ರವೀಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್ ನಟರಾಜ್, ದೇವನಹಳ್ಳಿ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…