2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.
ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ.
ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.
ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…