ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ಫೆಬ್ರವರಿ 16 ರಂದು ಮತದಾನ ನಡೆಯಲಿದೆ. ಫೆಬ್ರವರಿ 20 ರಂದು ಮತ ಎಣಿಕೆ ನಡೆಯಲಿದೆ.
ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆಯು ದಿನಾಂಕ 16.01.2024 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ. ಎನ್ ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ಚುನಾವಣಾ ವೇಳಾ ಪಟ್ಟಿಯಂತೆ ಚುನಾವಣಾ ಅಧಿಸೂಚನೆ ಜ. 23 (ಮಂಗಳವಾರ), ನಾಮಪತ್ರ ಸಲ್ಲಿಸಲು ಕೊನೆಯ ದಿನ 30 ಜನವರಿ 2024 (ಮಂಗಳವಾರ), ನಾಮಪತ್ರಗಳ ಪರಿಶೀಲನೆ ಜ. 31 (ಬುಧವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ – 02 ಫೆಬ್ರವರಿ 2024 (ಶುಕ್ರವಾರ), ಮತದಾನದ ದಿನಾಂಕ -16 ಫೆಬ್ರವರಿ 2024 (ಶುಕ್ರವಾರ), ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ, ಮತ ಎಣಿಕೆ ದಿನಾಂಕ- 20 ಫೆಬ್ರವರಿ 2024 (ಮಂಗಳವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- 23 ಫೆಬ್ರವರಿ 2024 (ಶುಕ್ರವಾರ).
ಭಾರತದ ಚುನಾವಣಾ ಆಯೋಗವು 16.01.2024 ರಂದು ಹೊರಡಿಸಲಾದ ಚುನಾವಣಾ ವೇಳಾ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ 178-ಹೊಸಕೋಟೆ, 179-ದೇವನಹಳ್ಳಿ, 180-ದೊಡ್ಡಬಳ್ಳಾಪುರ, 181-ನೆಲಮಂಗಲ ನಾಲ್ಕು ವಿಧಾನಸಭಾ ಕ್ಷೇತ್ರಗಳು ಒಳಗೊಂಡಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.