ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ಫೆಬ್ರವರಿ 16 ರಂದು ಮತದಾನ ನಡೆಯಲಿದೆ. ಫೆಬ್ರವರಿ 20 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆಯು ದಿನಾಂಕ 16.01.2024 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ. ಎನ್ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಚುನಾವಣಾ ವೇಳಾ ಪಟ್ಟಿಯಂತೆ ಚುನಾವಣಾ ಅಧಿಸೂಚನೆ ಜ. 23 (ಮಂಗಳವಾರ), ನಾಮಪತ್ರ ಸಲ್ಲಿಸಲು ಕೊನೆಯ ದಿನ 30 ಜನವರಿ 2024 (ಮಂಗಳವಾರ), ನಾಮಪತ್ರಗಳ ಪರಿಶೀಲನೆ ಜ. 31  (ಬುಧವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ – 02 ಫೆಬ್ರವರಿ 2024 (ಶುಕ್ರವಾರ), ಮತದಾನದ ದಿನಾಂಕ -16 ಫೆಬ್ರವರಿ 2024 (ಶುಕ್ರವಾರ), ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ, ಮತ ಎಣಿಕೆ ದಿನಾಂಕ- 20 ಫೆಬ್ರವರಿ 2024 (ಮಂಗಳವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- 23 ಫೆಬ್ರವರಿ 2024 (ಶುಕ್ರವಾರ).

ಭಾರತದ ಚುನಾವಣಾ ಆಯೋಗವು 16.01.2024 ರಂದು ಹೊರಡಿಸಲಾದ ಚುನಾವಣಾ ವೇಳಾ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ 178-ಹೊಸಕೋಟೆ, 179-ದೇವನಹಳ್ಳಿ, 180-ದೊಡ್ಡಬಳ್ಳಾಪುರ, 181-ನೆಲಮಂಗಲ ನಾಲ್ಕು ವಿಧಾನಸಭಾ ಕ್ಷೇತ್ರಗಳು ಒಳಗೊಂಡಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

3 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

7 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

8 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

9 hours ago