ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ 20661/62 ರಲ್ಲಿ ಕನ್ನಡ ಮಾಯ..! ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳ ಪಟ್ಟಿ ಇಲ್ಲದೇ ಇರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ ಸಂಚರಿಸುವ ರೈಲಿನಲ್ಲಿ ಕನ್ನಡ ಭಾಷೆಯ ಚಲನಚಿತ್ರ, ಕನ್ನಡ ಕಾರ್ಯಕ್ರಮಗಳಿಗೆ ಮಾನ್ಯತೆ ನೀಡದೇ ತೆಲುಗು, ತಮಿಳು, ಹಿಂದಿ, ಇಂಗ್ಲಿಷ್ ಭಾಷೆಯ ಚಲನಚಿತ್ರಗಳ ಆಯ್ಕೆ ಪಟ್ಟಿ ಇದೆ.
ಕೇಂದ್ರ ರೈಲ್ವೆ ಮಂತ್ರಿಗಳಾದ ಅಶ್ವಿನಿ ವೈಷ್ಣವ್ ಅವರೇ ಬೆಂಗಳೂರು ಮತ್ತು ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ 20661/62 ರಲ್ಲಿ ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳು ಇಲ್ಲವೇ ಇಲ್ಲ. ಇದನ್ನು ತಕ್ಷಣ ಸರಿ ಮಾಡಬೇಕಾಗಿ ಕನ್ನಡಿಗರ ಆಗ್ರಹ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ.
ಈ ಒಂದು ಬೆಂಗಳೂರು–ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಜೂನ್.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೋಪಾಲ್ ನ ರಾಣಿ ಕಮಲಪತಿ ನಿಲ್ದಾಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದರು.
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…