ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆಗೆ ದಿನಾಂಕ ಘೋಷಣೆ: ಜೂನ್ 03 ಕ್ಕೆ ಮತದಾನ

ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ. 06 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗವು, ಬೆಂಗಳೂರು ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು ದಿನಾಂಕ: 09 ಮೇ. 2024 (ಗುರುವಾರ) ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನ 16 ಮೇ. 2024 (ಗುರುವಾರ), ನಾಮಪತ್ರಗಳ ಪರಿಶೀಲನೆ ದಿನಾಂಕ- 17 ಮೇ. 2024 (ಶುಕ್ರವಾರ), ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾಂಕ – 20 ಮೇ. 2024 (ಸೋಮವಾರ), ಮತದಾನದ ದಿನಾಂಕ -03 ಜೂನ್.

2024 (ಸೋಮವಾರ), ಮತದಾನದ ಸಮಯ- ಬೆಳಿಗ್ಗೆ 8:00 ರಿಂದ ಸಂಜೆ 4:00 ಗಂಟೆ, ಮತ ಎಣಿಕೆ ದಿನಾಂಕ- ಜೂನ್ 06. 2024 (ಗುರುವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ- ಜೂನ್12. 2024 ( ಬುಧವಾರ). ಮತದಾನದ ಸಮಯ ಬೆಳಿಗ್ಗೆ 8.00 ರಿಂದ ಸಂಜೆ 4.00 ಗಂಟೆಯವರೆಗೆ ನಡೆಯಲಿದೆ.

ಚುನಾವಣೆಯ ಮಾದರಿ ನೀತಿ ಸಂಹಿತೆಯು ಮೇ 02 ರಿಂದಲೇ ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಪದವೀಧರರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 9378 ಪುರುಷ ಪದವೀಧರರು ಹಾಗೂ 8270 ಮಹಿಳಾ ಪದವೀಧರರು ಸೇರಿ ಒಟ್ಟು 17648 ಪದವೀಧರ ಮತದಾರರು ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

*ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ*

ಮತದಾರರ ನಿರಂತರ ನೋಂದಣಿ ಪ್ರಕ್ರಿಯೆಯು ಜಾರಿಯಲ್ಲಿರುತ್ತದೆ. ಈಗಾಗಲೇ 30.12.2023 ರಂದು ಅಂತಿಮ ಮತದಾರರ ‘ಪಟ್ಟಿಯನ್ನು ಪ್ರಚೂರ ಪಡಿಸಲಾಗಿರುತ್ತದೆ. ಮುಂದುವರೆಸುತ್ತಾ ಹೊಸದಾಗಿ ನೋಂದಾಯಿಸಬೇಕಾದ ಮತದಾರರಿಗೆ ದಿನಾಂಕ: 06.05.2024ರ ಸಂಜೆ 5.30 ರವರೆಗೆ ನೋಂದಣಿಗಾಗಿ ಅರ್ಜಿಯನ್ನು ಸ್ವೀಕರಿಸುವ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿರುತ್ತದೆ. ಕಾರಣ ಅರ್ಹರಿರುವ ಮತದಾರರು ನಿಗದಿ ಪಡಿಸಿದ ಕಾಲ ಮಿತಿಯೊಳಗೆ ನೋಂದಣಿ ಪ್ರಕ್ರಿಯೆಗಾಗಿ ತಮ್ಮ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಮತದಾನ ಹಕ್ಕನ್ನು ಚಲಾಯಿಸಿ ಸುಭದ್ರವಾದ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸೂಕ್ತ ಪಾತ್ರವಹಿಸಲು ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇತರೆ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಸ್ವೀಕರಿಸುವ ದೂರು / ಅಹವಾಲುಗಳನ್ನು ನಿವಾರಿಸುವ ಸಲುವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಕಛೇರಿ ಹಾಗೂ ಜಿಲ್ಲೆಯ ಉಪವಿಭಾಗಾಧಿಕಾರರಿಗಳ ಕಚೇರಿ & ತಹಸೀಲ್ದಾರ್ ಕಛೇರಿಗಳಲ್ಲಿ ದೂರು ನಿವಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಕೆಳಕಾಣಿಸಿದ ಸಹಾಯವಾಣಿ ಸಂಖ್ಯೆಗಳನ್ನು ನಿಗದಿಪಡಿಸಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರವರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಾಯವಾಣಿ ಸಂಖ್ಯೆ. 080-29902025, ಉಪವಿಭಾಗಾಧಿಕಾರಿ ರವರ ಕಚೇರಿ (ದೊಡ್ಡಬಳ್ಳಾಪುರ ಉಪವಿಭಾಗ) ಸಹಾಯವಾಣಿ ಸಂಖ್ಯೆ. 080-27622037, ತಹಶೀಲ್ದಾರ್ ಕಚೇರಿ(ಹೊಸಕೋಟೆ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-27931237, ತಹಶೀಲ್ದಾರ್ ಕಚೇರಿ (ದೇವನಹಳ್ಳಿ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-22122999, ತಹಶೀಲ್ದಾರ್ ಕಚೇರಿ (ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-27622002, ತಹಶೀಲ್ದಾರ್ ಕಚೇರಿ (ನೆಲಮಂಗಲ ವಿಧಾನಸಭಾ ಕ್ಷೇತ್ರ) ಸಹಾಯವಾಣಿ ಸಂಖ್ಯೆ. 080-27722126 ಮೇಲಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರವನ್ನು ಪಡೆದುಕೊಳ್ಳಬಹುದಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯು ಒಂದು ಅತ್ಯಂತ ಮಹತ್ವಪೂರ್ಣ ಹಾಗೂ ಪವಿತ್ರ ಕಾರ್ಯವಾಗಿರುತ್ತದೆ. ಕಾರಣ ಈ ಚುನಾವಣೆಯನ್ನು, ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಜರುಗುವಲ್ಲಿ ಪ್ರತಿಯೊಬ್ಬ ಮತದಾರರು ಹಾಗೂ ಎಲ್ಲಾ ರಾಜಕೀಯ ಪಕ್ಷದವರು ಹಾಗೂ ವರ್ಗದವರು ಸಕಾರತ್ಮಕವಾಗಿ ಕಾರ್ಯನಿರ್ವಹಿಸಿ ದೋಷರಹಿತವಾಗಿರುವಂತಹ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಎಲ್ಲರು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಅದಕ್ಕನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ. ಎನ್. ಶಿವಶಂಕರ ಅವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

9 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

10 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

10 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

12 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

16 hours ago