Categories: Accident

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ: ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ ಸರ್ಕಾರ

ಇಂದು ಹಾವೇರಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರದ ವತಿಯಿಂದ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಟಿಟಿ ವಾಹನ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿ 13 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಪರಶುರಾಮ್​​(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಎಂದು ಗುರುತಿಸಲಾಗಿದೆ. ಎಲ್ಲರೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್​ಎಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರು ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

2 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

3 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

4 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

6 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

9 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

21 hours ago