ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು ಎಂಬ ಹಂಬಲದಿಂದ ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ವಿನೂತನ ಪ್ರಯೋಗಕ್ಕೆ ಮುಂದಾಗಿ ಸೈ ಎನಿಸಿಕೊಂಡಿದ್ದಾರೆ. ಇಷ್ಟಕ್ಕೂ ಅದೇನಪ್ಪಾ ಅಂತೀರಾ… ಈ ಸ್ಟೋರಿ ಓದಿ…!
ಹೌದು, ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ರೈತರು ಬಿಳಿ ಸಾಸಿವೆ ಬೆಳೆದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲದೇ ವಿವಿಧ ರೀತಿಯ ಹಣ್ಣಿನ ಗಿಡಗಳು, ತೆಂಗು, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಸೇರಿದಂತೆ ಇನ್ನೂ ಅನೇಕ ರೀತಿಯ ನೂತನ ಕೃಷಿಗಾರಿಕೆಗೆ ಮುಂದಾಗಿದ್ದು ಸುತ್ತಮುತ್ತಲ ರೈತರು ಇವರ ವಿನೂತನ ಪ್ರಯೋಗಕ್ಕೆ ಫಿದಾ ಆಗಿದ್ದಾರೆ.
ಇನ್ನೂ, ಈ ಬಗ್ಗೆ ಮಾತನಾಡಿದ ರೈತ ಮಹಿಳೆ ವತ್ಸಲಾ, ನಾವು ನಮ್ಮ ಸ್ನೇಹಿತರೊಬ್ಬರಿಂದ ಬಿಳಿ ಸಾಸಿವೆ ಬಿತ್ತನೆ ತರಿಸಿಕೊಂಡು ನಾಟಿ ಮಾಡಿದೆವು. ನಮಗೆ ಇದು ಇಷ್ಟರ ಮಟ್ಟಿಗೆ ಯಶಸ್ಸು ತಂದುಕೊಡುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಊಹೆಗೂ ಮೀರಿ ಫಸಲು ಬಂದಿದೆ. ಕೇವಲ ಬಿಳಿ ಸಾಸಿವೆ ಮಾತ್ರವಲ್ಲ ನಾವು ವಿವಿಧ ತಳಿಯ ಹಣ್ಣಿನ ಗಿಡಗಳನ್ನು ಸಹ ನಾಟಿ ಮಾಡಿದ್ದೇವೆ ಎಂದು ತಿಳಿಸಿದರು.
ಒಟ್ಟಾರೆ ಈ ಯುವ ದಂಪತಿಗಳ ವಿನೂತನ ಪ್ರಯತ್ನಕ್ಕೆ ಮತ್ತಷ್ಟು ಯಶಸ್ಸು ಸಿಗಲಿ, ಮುಂದಿನ ಪೀಳಿಗೆಗೆ ಇವರ ವ್ಯವಸಾಯದ ವಿಧಾನ ಮಾದರಿಯಾಗಲಿ ಎಂಬುದು ನಮ್ಮ ಆಶಯ…….
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…