ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ…
ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್, ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ.
ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇರಳದ ಕಣ್ಣೂರಿನ ಅಬ್ದುಲ್, ಅಲೇನ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಪದೇ ಪದೇ ಅಪಘಾತ ಪ್ರಕರಣಗಳು ಮರುಕಳಿಸುತ್ತಿವೆ....…
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2026-27ನೇ ಸಾಲಿನ ಬಜೆಟ್ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಮಾ.23ರಂದು ಹಮ್ಮಿಕೊಳ್ಳಲಾಗಿದೆ. ಪಟ್ಟಣ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಯುವಕರ ಬಾಂಧವ್ಯ ಹೆಚ್ಚಾಗಲು ಎರಡನೇ ವರ್ಷದ ಕ್ರಿಕೆಟ್ ಆಯೋಜನೆ ಯಶಸ್ವಿಯಾಗಿದೆ. ಈ ಕ್ರೀಡಾಕೂಟದಲ್ಲಿ ಜೈ…
ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು ಇಂದು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು…
ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಳಗುಪ್ಪೆ ಗ್ರಾಮದ ಕುರಿ ಮತ್ತು ಮೇಕೆ ಫಾರಂನ ಬೀಗ ಹೊಡೆದು, ಕುರಿ ಮತ್ತು ಮೇಕೆಗಳನ್ನು…
ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ…