ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ: ಹಬ್ಬ ಮುಗಿಸಿ ಬರ್ತಿದ್ದ ನಾಲ್ವರು ದಾರುಣ ಸಾವು…!

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ…

ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌, ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ.

ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೇರಳದ ಕಣ್ಣೂರಿನ ಅಬ್ದುಲ್​, ಅಲೇನ್​ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 hour ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

14 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

17 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

19 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

22 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

23 hours ago