ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು: ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ಎಸಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು‌ ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ‌ ನಡೆಸುತ್ತಿದ್ದಾರೆ.

ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದ ರಾಜ್ಯದ 11 ಕಡೆ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಜೊತೆಗೆ ಸಾರ್ವಜನಿಕರ ಅಹವಾಲನ್ನು ಸ್ವೀಕಾರ ‌ಮಾಡುತ್ತಿರುವ ಅಧಿಕಾರಿಗಳ ತಂಡ

ಈ ವೇಳೆ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ, ಲೋಕಾಯುಕ್ತ ಲೋಕಾಯುಕ್ತಾ ಡಿವೈಎಸ್ಪಿ ವೀರೇಂದ್ರ ಕುಮಾರ್ , ಇನ್ಸ್ ಪೆಕ್ಟರ್ ಸೇರಿದಂತೆ‌ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಸಾರ್ವಜನಿಕರೊಬ್ಬರು ಜೋರು ದನಿಯಲ್ಲಿ ಅಧಿಕಾರಿಗಳ ವಿಳಂಬ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಡಿ ದರಕಾಸ್ತು ಮಾಡಿಸಲು ಅರ್ಜಿ ನೀಡಿ ಎರಡು ವರ್ಷ ಕಳೆದರೂ ಅಧಿಕಾರಿಗಳು ಸ್ಪಂದಿಸಿಲ್ಲ‌ ಎಂದು ತರಾಟೆಗೆ ತೆಗೆದುಕೊಂಡರು. ಆಗ ಡಿವೈಎಸ್ಪಿ ವೀರೇಂದ್ರ ಅವರು ಆ ವ್ಯಕ್ತಿಯನ್ನು ಮನವೊಲಿಸಿ ದೂರು ವಿವರಿಸುವಂತೆ ಕೇಳಿ ಕರೆದೋಯ್ದರು.

Leave a Reply

Your email address will not be published. Required fields are marked *