ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರ ಅಂತಿಮ ಮತದಾರರ ಪಟ್ಟಿ ಪ್ರಕಟ: ಅಂತಿಮ ಮತದಾರರ ಪಟ್ಟಿಗೆ 2006 ಶಿಕ್ಷಕರು, 17648 ಪದವೀಧರರು ನೋಂದಣಿ

ವಿಧಾನ ಪರಿಷತ್ತಿನ ಚುನಾವಣೆ- 2023 ರ ಸಂಬಂಧ ಮತದಾರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಅಂತಿಮ ಮತದಾರರ ಪಟ್ಟಿಗಳ ಪ್ರತಿಯನ್ನು ಇಂದು(ಡಿಸೆಂಬರ್ 30) ಪ್ರಕಟಗೊಳಿಸಿದ್ದು, ಅಂತಿಮ ಮತದಾರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023  ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕವಾಗಿ 2023 ರ ಸೆಪ್ಟೆಂಬರ್ 30ರಂದು ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23 ರಂದು ಪ್ರಕಟಿಸಲಾಗಿತ್ತು. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಲು ಡಿಸೆಂಬರ್ 09 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಅಂತಿಮ ಮತದಾರರ ಪಟ್ಟಿಗಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗಿದ್ದು ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು ಅರ್ಜಿದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತರಿ ಪಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 1045  ಪುರುಷ ಶಿಕ್ಷಕರು ಹಾಗೂ 961 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 2006 ಶಿಕ್ಷಕರು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ 9378 ಪುರುಷ ಮತದಾರರು ಹಾಗೂ 8270 ಮಹಿಳಾ ಮತದಾರರು ಸೇರಿ 17648 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಂತಿಮ ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ,  ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ ಎನ್ ಅವರು ತಿಳಿಸಿದರು.

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

2 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

2 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

9 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

9 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

12 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

15 hours ago