ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಾಳೆ(ಶುಕ್ರವಾರ) ಮತದಾನ: ಮತದಾನ ಕೇಂದ್ರಗಳ ವಿವರ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ. ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

7 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

8 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

11 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

16 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

19 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago