
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಕಾರ್ಯವು ಜಿಲ್ಲೆಯ 06 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು ಅಪರಾಹ್ನ 12 ಗಂಟೆಯವರೆಗೆ ಶೇ. 41.16 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳಲ್ಲಿನ ಒಟ್ಟು 6 ಮತದಾನ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ.
ಮಧ್ಯಾಹ್ನ 12 ಗಂಟೆ ವೇಳೆಗೆ ದೊಡ್ಡಬಳ್ಳಾಪುರ ಟೌನ್- 42.47, ದೊಡ್ಡಬಳ್ಳಾಪುರ ಹೋಬಳಿ-63.95, ದೇವನಹಳ್ಳಿ ಟೌನ್- 36.42, ಹೊಸಕೊಟೆ ಟೌನ್-31.51, ನೆಲಮಂಗಲ ಟೌನ್-52.04, ಸೋಂಪುರ ಹೋಬಳಿ-48.77 ರಷ್ಟು ಮತದಾನವಾಗಿದೆ ಎಂದು ಅವರು ತಿಳಿಸಿದ್ದಾರೆ.