
ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದು, ಈ ಪೈಕಿ 22,468 ಮತಗಳು ಚಲಾವಣೆಯಾಗಿದ್ದವು. ಮತ ಎಣಿಕೆಯಲ್ಲಿ 20,611 ಮತಗಳು ಸಿಂಧುವಾಗಿದ್ದು, 1,857 ಮತಗಳು ಅಸಿಂಧುವಾಗಿವೆ.
ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 10,810 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು 9,902 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ರಂಗನಾಥ್ ಅವರು 908 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.