ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯಲ್ಲಿ ಖರೀದಿಸಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಅನುಮೋದನೆ ನೀಡಿದೆ.

ಕೃಷಿ ಸಚಿವರಾದ ಶ್ರೀ ಪಿ.ಎಂ. ನರೇಂದ್ರ ಸ್ವಾಮಿ ಅವರು ಸಲ್ಲಿಸಿದ್ದ ಪ್ರಸ್ತಾವನೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸೆ.29 ರಂದು ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೂರ್ಯಕಾಂತಿ ಹಾಗೂ ಸೋಯಾಬೀನ್ ಖರೀದಿಗೆ ಅಧಿಕೃತ ಆದೇಶ ಹೊರಡಿಸಲಿದೆ.

ಹೆಸರುಕಾಳು ಕ್ವಿಂಟಲ್‌ಗೆ ₹ 8,780 ಬೆಂಬಲ ಬೆಲೆ ನಿಗದಿಪಡಿಸಿದ್ದು, ಒಟ್ಟು 38,250 ಮೆಟ್ರಿಕ್ ಟನ್ ಖರೀದಿಸಲು ಅವಕಾಶ ಕಲ್ಪಿಸಿದೆ. ಸೂರ್ಯಕಾತಿ ಕ್ವಿಂಟಲ್‌ಗೆ ₹ 8,343 ನಿಗದಿ ಮಾಡಿದ್ದು, ಒಟ್ಟು 13,413 ಮೆಟ್ರಿಕ್ ಟನ್ ಖರೀದಿಸಬಹುದಾಗಿದೆ. ಅದೇ ರೀತಿ ಸೋಯಾಬೀನ್ ಕ್ವಿಂಟಲ್‌ಗೆ ₹5,708 ನಿಗದಿಪಡಿಸಿದ್ದು, ಒಟ್ಟು 1,15,500 ಮೆಟ್ರಿಕ್ ಟನ್ ಖರೀದಿಗೆ ಅನುಮೋದನೆ ನೀಡಲಾಗಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ
ಉದ್ದಿನಕಾಳಿಗೂ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಅನುಮೋದನೆ ನೀಡಲಿದೆ ಎಂದು ಕೃಷಿ ಸಚಿವರಾದ ಶ್ರೀ ಪಿ.ಎಂ.ನರೇಂದ್ರ ಸ್ವಾಮಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ನೋಂದಣಿ ಮಾಡಿಕೊಳ್ಳಲು ರೈತರಿಗೆ ಕರೆ*

ಗ್ರಾಮೀಣ ಹಂತದಲ್ಲಿ ಟಿಎಪಿಸಿಎಂಎಸ್(TAPCMS), ಪಿಎಸಿಎಸ್ (PACS) ಹಾಗೂ ಎಫ್‌ಪಿಒ(FPO)ಗಳ ಮೂಲಕ ಖರೀದಿ ಪ್ರಕ್ರಿಯೆ ನಡೆಯಲಿದೆ. ರೈತರು ಸದರಿ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆಯಲು ಸಮೀಪದ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ FID ನೀಡಿ ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ.

*ಕೃಷಿ ಯೋಜನೆಗಳಿಗೆ ಭರಪೂರ ಅನುದಾನ*
2026-27ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಕೃಷಿ ಯೋಜನೆಗಳಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೃಹತ್ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಿವೆ.

ಪಿಎಂ-ಆರ್.ಕೆ.ವಿ.ವೈ (PM-RKVY) ಯೋಜನೆಯಡಿ ಒಟ್ಟು ₹921.78 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ. ಇದರಲ್ಲಿ ಕೇಂದ್ರದ ಪಾಲು (ಶೇ. 60) ಅಂದರೆ ₹ 553.07 ಕೋಟಿ ಹಾಗೂ ರಾಜ್ಯದ ಪಾಲು (ಶೇ. 40) ಅಂದರೆ ₹368.71 ಕೋಟಿ ಇರಲಿದೆ.
ಮಣ್ಣು ಆರೋಗ್ಯ, ಕೃಷಿ ಸಿಂಚಾಯಿ, ಕೃಷಿ ಯಾಂತ್ರಿಕರಣ ಸೇರಿದಂತೆ ಹಲವು ಕಾರ್ಯಕ್ರಮಗಳು ಈ ಯೋಜನೆಯಡಿ ಜಾರಿಯಾಗಲಿವೆ.
ಕೃಷಿಯೋನ್ನತಿ ಯೋಜನೆಯಡಿ ಒಟ್ಟು ₹778.86 ಕೋಟಿ ವೆಚ್ಚದ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಕೇಂದ್ರದ ಪಾಲು ₹471.95 ಕೋಟಿ ಮತ್ತು ರಾಜ್ಯದ ಪಾಲು ₹306.91 ಕೋಟಿ ಇರಲಿದೆ. ಆಹಾರ ಭದ್ರತೆ, ಖಾದ್ಯ ತೈಲ ಅಭಿಯಾನ ಹಾಗೂ ಡಿಜಿಟಲ್ ಬೆಳೆ ಸಮೀಕ್ಷೆಗಳಿಗೆ ಈ ಹಣ ವಿನಿಯೋಗವಾಗಲಿದೆ.
ಎರಡನೇ ಕಂತಿನ ಅನುದಾನ ಬಿಡುಗಡೆ
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೃಷಿ ಕ್ಷೇತ್ರದ ಅಭಿವೃದ್ಧಿ ಮತ್ತು ರೈತರ ಕಲ್ಯಾಣಕ್ಕಾಗಿ ಕರ್ನಾಟಕಕ್ಕೆ ₹276.54 ಕೋಟಿ ಮತ್ತು ಕೃಷಿಯೋನ್ನತಿ ಯೋಜನೆ (KY) ಅಡಿ ₹131.45 ಕೋಟಿ ಸೇರಿದಂತೆ ಒಟ್ಟು ₹407.99 ಕೋಟಿಗಳ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ ಎಂದು ಕೃಷಿ ಸಚಿವರಾದ ಶ್ರೀ ಪಿ.ಎಂ.ನರೇಂದ್ರಸ್ವಾಮಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 2026 ರಲ್ಲಿ ಮೊದಲನೇ ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಕೃಷಿ ಸಚಿವರಾದ ಶ್ರೀ ಪಿ.ಎಂ. ನರೇಂದ್ರ ಸ್ವಾಮಿ ಅವರು ದೆಹಲಿಯಲ್ಲಿ ಖುದ್ದು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಫಲವಾಗಿ ಎರಡನೇ ಕಂತಿನ ಅನುದಾನವೂ ಬಿಡುಗಡೆಯಾಗಿದೆ.

“ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವು ಕರ್ನಾಟಕದ ಕೃಷಿ ಕ್ಷೇತ್ರದ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ. ರೈತರಿಗೆ ಹೆಚ್ಚಿನ ಪ್ರಯೋಜನ ಖಚಿತಪಡಿಸಿಕೊಳ್ಳಲು ನೆರವಾಗಲಿದೆ. ಜತೆಗೆ ಕೃಷಿ ಬಲಪಡಿಸಲು, ರೈತರ ಆದಾಯ ಸುಧಾರಿಸಲು ಮತ್ತು ಕೃಷಿ ಕ್ಷೇತ್ರದ ಒಟ್ಟಾರೆ ಅಭಿವೃದ್ಧಿಗಾಗಿ ಕರ್ನಾಟಕದೊಂದಿಗೆ ನಿಕಟವಾಗಿ ಕೆಲಸ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ” ಎಂದು ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ ಸಿಂಗ್‌ ಚೌಹಾಣ್ ಅಭಿಪ್ರಾಯಪಟ್ಟಿದ್ದಾರೆ.

Ramesh Babu

Journalist

Recent Posts

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 hours ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

5 hours ago

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…

5 hours ago

ಉರ್ದು ಹಬ್ಬವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ನಿಖಿಲ್ ಕುಮಾರಸ್ವಾಮಿ

ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…

5 hours ago

ಜಿಲ್ಲೆಯಲ್ಲಿ ಪಾತಾಳ ಮುಟ್ಟಿದ ಅಂತರ್ಜಲ! ಕೊಳವೆಬಾವಿಗಳ ಅತಿಯಾದ ಬಳಕೆ, ಮಳೆ ಕೊರತೆ; 1,250 ಅಡಿಯಲ್ಲೂ ನೀರು ಸಿಗುವುದು ಅನುಮಾನ

ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…

14 hours ago

ಕಸಾಪ ಪುನಶ್ಚೇತನಕ್ಕೆ ಚಿಂತನೆ: ಡಾ. ಸಿ. ಸೋಮಶೇಖರ್

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯಾಗಿ ರೂಪಿಸುವುದರ ಜೊತೆಗೆ, ಪರಿಷತ್ತಿಗೆ ಕಾಯಕಲ್ಪ ನೀಡುವ ಉದ್ದೇಶ ಹೊಂದಲಾಗಿದೆ…

15 hours ago