ಕನಿಷ್ಟ ಬೆಂಬಲ ಯೋಜನೆಯಡಿ ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮಾರ್ಚ್ 03 ರಿಂದ ಜೂನ್ 30 ರವರೆಗೆ ರಾಗಿ ಖರೀದಿಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೊಂದಾಯಿಸಿಕೊಳ್ಳಲಾಗಿದೆ.
ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630), ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435), ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687), ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಶಿವಕುಮಾರ್ (9880361514) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…