ಬೆಂಬಲ ಬೆಲೆ ರಾಗಿ ಖರೀದಿ: ಹೆಜ್ಜೆ ಹೆಜ್ಜೆಗೂ ಅಧಿಕಾರಿಗಳಿಂದ ರೈತರಿಗೆ ಮೋಸ: ಬೇಜವಾಬ್ದಾರಿ ಅಧಿಕಾರಿಗಳ ಮೇಲೆ ಸುಮೊಟೋ ಕೇಸ್ ಫಿಕ್ಸ್

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ‌ ಕೇಂದ್ರ, ರಾಗಿ ತೂಕ ಹಾಕುವ ಕೇಂದ್ರ(Weighbridge) ಕೇಂದ್ರ, ಸರ್ಕಾರಿ ಆಸ್ಪತ್ರೆ ಬಳಿ ಇರುವ ಉಗ್ರಾಣ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ‌ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.

ಈ ವೇಳೆ ಪಬ್ಲಿಕ್ ಮಿರ್ಚಿ ನ್ಯೂಸ್ ವೆಬ್ ಸೈಟ್ ನೊಂದಿಗೆ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ಅವ್ಯವಸ್ಥೆಗಳಿಂದ ತುಂಬಿ‌ ತುಳುಕುತ್ತಿದೆ. ಕುಡಿಯುವ ನೀರಿನ‌ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ತೂಕದಲ್ಲಿ ಮೋಸ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ರೈತರು ಪರದಾಡುತ್ತಿದ್ದಾರೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಕಿಡಿಕಾರಿದರು.

ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲ ರೈತರು ಆಗಮಿಸುತ್ತಿದ್ದಾರೆ. ಇವರಿಗೆ ಸ್ಥಳದಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿಲ್ಲ. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಿಲ್ಲ. ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು.

ರಾಗಿ ತೂಕ ಹಾಕುವ ಕೇಂದ್ರ(Weighbridge)ದಲ್ಲಿ ತೂಕದಲ್ಲಿ ಏರುಪೇರು ಆಗಿ ರೈತರಿಗೆ ಮೋಸ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ರಾಗಿ ಉಗ್ರಾಣ ಕೇಂದ್ರದಲ್ಲಿ ಸರ್ಕಾರಿ ಚೀಲ 50ಕೆ.ಜಿ ಎಂದು ಇರುತ್ತದೆ. ಆದರೆ, ತೂಕ ಹಾಕಿದಾಗ 44, 42, 45, 48, 49 ಕೆ.ಜಿ ಬರುತ್ತಿದೆ ಎಂದರು.

ಅಧಿಕಾರಿಗಳ ಬೇಜವಾಬ್ದಾರಿ, ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಭಾರೀ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಅವರ ಮೇಲೆ ಇವರು, ಇವರ ಮೇಲೆ ಅವರು ಹೇಳಿ ಕಡೆಗೆ ಅದಕ್ಕು  ನಮಗು ಯಾವ ಸಂಬಂಧವಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರೈತ ಬಿತ್ತನೆ ಬಿತ್ತಿ ಬೆಳೆ ಬೆಳೆದು ಮಾರಾಟ ಮಾಡುವವರಿಗೂ ಇಂತಹ ಅಧಿಕಾರಿಗಳಿಂದ ವಂಚನೆ ಒಳಗಾಗುತ್ತಿದ್ದಾನೆ‌. ಇಲ್ಲಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದಾಗಿದೆ ಇಲ್ಲಿನ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ರೈತರಿಗೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ. ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸುಮಟೋ ಕೇಸ್ ದಾಖಲು ಮಾಡುತ್ತಾನೆ. ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಖಂಡಿತ ಕ್ರಮ ಜರುಗಿಸುತ್ತೇನೆ ಎಂದು ಹೇಳಿದರು.

ಸ್ಥಳದಲ್ಲಿ ಕುಡಿಯುವ ನೀರು, ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಪುರುಷ,‌ ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ಕೌಂಟರ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಮೂರು ದಿನಗಳೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.

ತೂಕ ನಿಯಮಬದ್ಧವಾಗಿ ಹಾಕಬೇಕು, ರಾಗಿ ಚೀಲದ ತೂಕದಲ್ಲಿ ಮೋಸವಾಗಬಾರದು, ಸರ್ಕಾರದ ಯೋಜನೆಯನ್ನು ರೈತರಿಗೆ ಯಾವುದೇ ಅನ್ಯಾಯ ಮಾಡದೇ ರೈತರಿಗೆ ತಲುಪುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾ‌ಮಹೇಶ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

3 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

12 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

15 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

16 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago