
ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಪೋಟಕ ವಸ್ತುಗಳನ್ನು ಸಿಡಿಸುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ ಬೆನ್ನಲ್ಲೇ ಪೊಲೀಸ್ ಇಲಾಖಾಧಿಕಾರಿಗಳು, ಸಿಬ್ಬಂದಿ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಪೋಟಕ ವಸ್ತುಗಳನ್ನು ಸಿಡಿಸಬಾರದು ಎಂದು ಗಣೇಶ ಕಾರ್ಯಕ್ರಮದ ಆಯೋಜಕರಿಗೆ ಸೂಚನೆ ನೀಡುತ್ತಿದ್ದಾರೆ…

ದೊಡ್ಡತುಮಕೂರಿನಲ್ಲಿ ಡಿಸಿ ಆದೇಶವಿದ್ದರೂ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಲು ಮುಂದಾದಗ ಕೂಡಲೇ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪಟಾಕಿ ಸಿಡಿಸದಂತೆ ಆಯೋಜಕರಿಗೆ ಸೂಚನೆ ನೀಡುತ್ತಿರುವ ದೃಶ್ಯ ಕಂಡುಬಂತು….