ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ತಾಣಗಳಾದ ದೇವನಹಳ್ಳಿ ತಾಲ್ಲೂಕಿನ ಕೋಟೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಚಿಕ್ಕ ಮಧುರೆಯ ಶನಿ ಮಹಾತ್ಮ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಗಂಗಾಧರೇಶ್ವರ ಸ್ವಾಮಿ ಮತ್ತು ಹೊನ್ನಾದೇವಿ ದೇವಸ್ಥಾನಗಳನ್ನು ಒಳಗೊಂಡ ಪ್ರವಾಸಿ ತಾಣಗಳಿಗೆ ಬೆಂಗಳೂರು ಗ್ರಾಮಾಂತರ ಪ್ರವಾಸ(ಬಿ.ಆರ್.ಟಿ), ವ್ಯವಸ್ಥಿತ ಪ್ರವಾಸವನ್ನು ಕೆ.ಎಸ್.ಡಿ.ಟಿ.ಸಿ ನಿಗಮದಿಂದ ಆಯೋಜನೆ ಮಾಡಲಾಗಿದ್ದು, ಆಸಕ್ತ ಪ್ರವಾಸಿಗರು ಆನ್ಲೈನ್ ಮೂಲಕ ಬುಕಿಂಗ್ ಮಾಡಬಹುದಾಗಿದೆ.
ಪ್ರತೀ ದಿನ ಯಶವಂತಪುರ ಕೆಎಸ್‌ಟಿಡಿಸಿ ಕಚೇರಿಯಿಂದ ಬೆಳಿಗ್ಗೆ 7 ಗಂಟೆಗೆ ಬಸ್ ತೆರಳಿ ಸುಮಾರು 8:30 ಕ್ಕೆ ದೇವನಹಳ್ಳಿ ಕೋಟೆಗೆ ತಲುಪುತ್ತದೆ, 10 ಗಂಟೆಗೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ, 11:45ಕ್ಕೆ ಚಿಕ್ಕ ಮಧುರೆ ಹಾಗೂ ಶನಿ ಮಹಾತ್ಮ ದೇವಸ್ಥಾನಕ್ಕೆ, ಮಧ್ಯಾಹ್ನದ ಊಟದ ಸಮಯ 1:30 ರಿಂದ 2 ಗಂಟೆಯವರೆಗೆ. 2:30 ಕ್ಕೆ ಶಿವಗಂಗೆಯ ಗಂಗಾಧರೇಶ್ವರ ಮತ್ತು ಹೊನ್ನಾದೇವಿ ದೇವಾಲಯಕ್ಕೆ, ಕೊನೆಯದಾಗಿ 6 ಗಂಟೆಗೆ ಯಶವಂತಪುರ ಕೆಎಸ್‌ಟಿಡಿಸಿ ಕಚೇರಿಗೆ ವಾಪಸ್ಸಾಗುವುದು.
ಆಸಕ್ತ ಪ್ರವಾಸಿಗರು ಕೆ.ಎಸ್.ಡಿ.ಟಿ.ಸಿ ಯ ಅಧಿಕೃತ ಜಾಲತಾಣವಾದ www.kstdc.co ಮುಖಾಂತರ ಟಿಕೆಟ್ ಬುಕ್ ಮಾಡಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-43344334/8970650070 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…