2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85.08ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ತಿಳಿಸಿದ್ದಾರೆ.
ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚುನಾವಣೆಯ ಇತಿಹಾಸದಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ 84.02% ರಷ್ಟು ಮತದಾನವಾಗಿತ್ತು. ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ ಶೇ.85.08 ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.
ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರ
178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 90.95%
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 84.71%
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 84.52%
181-ನೆಲಮಂಗಲ ವಿಧಾನಸಭಾ ಕ್ಷೇತ್ರ: 79.66%