ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ದೊಡ್ಡಬಳ್ಳಾಪುರದವರಾದ ಸ್ವಾತಂತ್ರ್ಯ ಸೇನಾನಿ ಟಿ.ಸಿದ್ದಲಿಂಗಯ್ಯ ಮತ್ತು ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರನ್ನು ಉಲ್ಲೇಖ ಮಾಡಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಮಂಡ್ಯ ಜಿಲ್ಲೆಯ ಶಿವಪುರ ಧ್ವಜ ಸತ್ಯಾಗ್ರಹ ಘಟನೆಯನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ ಸ್ವಾತಂತ್ರ್ಯ ಹೋರಾಟಗಾರ ಟಿ.ಸಿದ್ದಲಿಂಗಯ್ಯ ಅವರ ನೇತೃತ್ವದ ಹೋರಾಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಖ್ಯಾತ ವಿಮರ್ಶಕ ಡಾ.ಡಿ.ಆರ್.ನಾಗರಾಜ್ ಅವರ ವಿಚಾರಧಾರೆಗಳನ್ನು ಸಹ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದರು.
ಸಮ್ಮೇಳನಕ್ಕೆ ಒತ್ತಾಯ :- ಮುಂದಿನ 88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು ಒತ್ತಾಯಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ ಅಖಿಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿ ಎಂಬ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನಿವೃತ್ತ ಅಧ್ಯಾಪಕ. ವಿ.ಎಸ್.ಹೆಗಡೆ, ಶಿಕ್ಷಕರುಗಳಾದ ಎಚ್.ಎನ್.ಪ್ರಕಾಶ್, ಕೋದಂಡರಾಮ್, ಸಿ.ಅಣ್ಣಯ್ಯ ಮುಂತಾದವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…