ಜಿಲ್ಲೆಯಲ್ಲಿ ಎಎವೈನ 14,352 ಮತ್ತು ಪಿಹೆಚ್ ಹೆಚ್ ನ 2,16,657 ಒಟ್ಟು 2,31,009 ಪಡಿತರ ಚೀಟಿಗಳಿದ್ದು, ಆ ಪೈಕಿ ಸಕ್ರಿಯವಾಗಿರುವ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿರುವ ಒಟ್ಟು 1,70,287 ಪಡಿತರ ಚೀಟಿದಾರರಿಗೆ ರೂ. 9,84,50,910 ರೂ ಕೋಟಿ ಹಣವನ್ನು ಡಿಬಿಟಿ ಮುಖಾಂತರ ಅನ್ನಭಾಗ್ಯ ಯೋಜನೆಯಡಿ ಅರ್ಹ ಪಡಿತರ ಕುಟುಂಬಗಳಿಗೆ ನಗದು ವರ್ಗಾವಣೆಯನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಜಿ.ಗಿರಿಜಾ ದೇವಿ ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ, ವಿತರಿಸಲು ಉದ್ದೇಶಿಸಲಾಗಿದ್ದು, 5 ಕೆ.ಜಿ. ಅಕ್ಕಿಯ ಬದಲಾಗಿ ಪಡಿತರ ಚೀಟಿ ಕುಟುಂಬದಲ್ಲಿನ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿಗೆ ರೂ.34 ರಂತೆ ಪ್ರತಿ ಸದಸ್ಯರಿಗೆ ರೂ.170 ರಂತೆ ಪಡಿತರ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗಿದೆ.
ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ 3 ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರಧಾನ್ಯ ಪಡೆಯುತ್ತಿರುವುದರಿಂದ ಅಂತಹ ಕುಟಂಬಗಳಿಗೆ ನಗದು ಸೌಲಭ್ಯ ನೀಡಲಾಗುವುದಿಲ್ಲ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯ ಕುಟಂಬದಲ್ಲಿ 4 ಸದಸ್ಯರಿದ್ದರೆ ಈ ಕುಟುಂಬವು 170 ರೂಗಳನ್ನು, 5 ಸದಸ್ಯರನ್ನು ಹೊಂದಿರುವ ಕುಟುಂಬವು 510 ರೂಗಳನ್ನು, 6 ಸದಸ್ಯರನ್ನು ಹೊಂದಿರುವ ಕುಟುಂಬವು 850 ರೂಗಳನ್ನು ಪಡೆಯುತ್ತದೆ. ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ಅನುಪಾತವು ಮುಂದುವರೆಯುತ್ತದೆ.
ಒಂದು ವೇಳೆ ಪಡಿತರ ಚೀಟಿದಾರರಿಗೆ ಹಣ ಜಮೆ ಆಗದಿದ್ದಲ್ಲಿ , ಆಧಾರ್ ಸಂಖ್ಯೆಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಲಿಂಕ್ ಮಾಡದೆ ಇರುವದು; ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ; ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದಾಗ; ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದಿರುವಾಗ; ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರವನ್ನು ಪಡೆಯದೆ ಇರುವಾಗ ಹಣ ಜಮೆ ಆಗದಿರುವ ಸಾಧ್ಯತೆಗಳಿರುತ್ತವೆ.
ಈ ನ್ಯೂನತೆಗಳನ್ನು ಜುಲೈ 20 ನೇ ತಾರೀಖಿನೊಳಗೆ ಸರಿಪಡಿಸಿಕೊಂಡಲ್ಲಿ ಆಗಸ್ಟ್ ಮಾಹೆಗೆ ಸಂಬಂಧಿಸಿದಂತೆ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಲು ಕ್ರಮ ವಹಿಸಲಾಗುವುದು.
ಕುಟುಂಬದ ಮುಖ್ಯಸ್ಥರನ್ನು ಗುರುತಿಸಿರುವ, ಆಧಾರ್ ಜೋಡಣೆ ಮಾಡಿರುವ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತ ಪಡಿತರ ಚೀಟಿಯ ಕುಟುಂಬಗಳು ನಗದು ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಜಿಲ್ಲೆಯಲ್ಲಿ ಒಟ್ಟು 34,456 ಪಡಿತರ ಚೀಟಿಗಳಲ್ಲಿ ಕೆಲವು ಕುಟುಂಬದ ಮುಖ್ಯಸ್ಥರು ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿರುವುದಿಲ್ಲ. ಕೆಲವರು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಿರುವುದಿಲ್ಲ. ಇನ್ನೂ ಕೆಲವರು ಬ್ಯಾಂಕ್ ಖಾತೆಯನ್ನು ತೆರೆದಿರುವುದಿಲ್ಲ.
ಈ ಮಾಹಿತಿಯನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಚುರ ಪಡಿಸಲಾಗಿದೆ, ಈ ರೀತಿ ಡಿಬಿಟಿಯಿಂದ ಜುಲೈ-2023ರ ಮಾಹೆಗೆ ವಂಚಿತರಾಗಿರುವ ಪಡಿತರ ಚೀಟಿದಾರರು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿದ ನಂತರ ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವಗೊಳಿಸಿದ ನಂತರ ಹಾಗೂ ಇದುವರೆಗೂ ಕುಟುಂಬದ ಮುಖ್ಯಸ್ಥರು ಸಕ್ರಿಯ ಬ್ಯಾಂಕ್ ಖಾತೆ ಹೊಂದಿಲ್ಲದಿದ್ದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾತೆಯನ್ನು ತೆರೆದರೆ ಮುಂದಿನ ಮಾಹೆಯ ಡಿಬಿಟಿಗೆ ಅರ್ಹರಾಗಿರುತ್ತಾರೆ. ಈ ಕಾರ್ಯವನ್ನು ಇದೇ ಜುಲೈ 20ರ ಒಳಗಾಗಿ ಮುಕ್ತಗೊಳಿಸಲು ತಿಳಿಸಲಾಗಿದೆ.
ಎಲ್ಲಾ ನ್ಯಾಯಬೆಲೆ ಅಂಗಡಿಯವರಿಗೆ ಸಭೆಯನ್ನು ಕರೆದು ಸರ್ಕಾರದ ಈ ಕಾರ್ಯಕ್ರಮದ ಬಗ್ಗೆ ತಿಳುವಳಿಕೆ ನೀಡಿ ಕಾರ್ಡುದಾರರಿಗೆ ಸಹಕರಿಸಲು ಹಾಗೂ ಯಶಸ್ವಿಗೊಳಿಸಲು ತಿಳಿಸಲಾಗಿರುತ್ತದೆ.
ಹಣ ವರ್ಗಾವಣೆಯಾದ ಬಗ್ಗೆ ಹಾಗೂ ಇತರೆ ವಿವರಗಳನ್ನು http://ahara.kar.nic.in/status2/ status-of-dbt.aspx ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಜಿ.ಗಿರಿಜಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…