‘ಬೆಂ.ಗ್ರಾ ಜಿಲ್ಲೆಯಲ್ಲಿ 62,854 ಹೆಕ್ಟೇರ್ ಬೆಳೆ ಹಾನಿ: ರೈತರಿಗೆ 52.88 ಕೋಟಿ ಪರಿಹಾರದ ಅಂದಾಜು’

ದೇವನಹಳ್ಳಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 2,20,292 ಮಹಿಳೆಯರಿಗೆ ಮಾಸಿಕ ತಲಾ 2,000 ರೂ.ನಂತೆ ಒಟ್ಟು 1,238.34 ಕೋಟಿ ರೂ. ನೇರವಾಗಿ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ತಿಳಿಸಿದರು.

ದೇವನಹಳ್ಳಿ ಪಟ್ಟಣದ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,39,080 ಕುಟುಂಬಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದ್ದು, ಇದಕ್ಕಾಗಿ 564 ಕೋಟಿ ರೂ. ಸಹಾಯಧನ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 2,25,633 ಬಿಪಿಎಲ್ ಕುಟುಂಬಗಳ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

ಶಕ್ತಿ ಯೋಜನೆಯಡಿ 13.90 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, 310 ಕೋಟಿ ರೂ. ರಿಯಾಯಿತಿ ನೀಡಲಾಗಿದೆ. ಯುವನಿಧಿ ಯೋಜನೆಯಡಿ 4,956 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 4,101 ಅಭ್ಯರ್ಥಿಗಳಿಗೆ 122 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 62,854 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ರೈತರಿಗೆ ಪರಿಹಾರ ವಿತರಿಸಲು 52.88 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 1,192 ಗ್ರಾಮಗಳ ಪೈಕಿ 1,134 ಗ್ರಾಮಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, 845 ಕಾಮಗಾರಿಗಳು ಪೂರ್ಣಗೊಂಡಿವೆ. ಈ ಮೂಲಕ 1.84 ಲಕ್ಷ ಕುಟುಂಬಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಜಿಲ್ಲೆಯ 32 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಗೆ ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಾಸಂತಿ ಅಮರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಎಂ.ವಿ., ಅಪರ ಜಿಲ್ಲಾಧಿಕಾರಿ ರಂಗನಾಥ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪಾರಿವಾಳ ಗುಟ್ಟದ ಬಳಿ ಕನ್ನಡ ಭವನ, ಆವತಿ ಬಳಿ ಕೆಂಪೇಗೌಡ ಥೀಮ್ ಪಾರ್ಕ್-ಕೆ.ಎಚ್ ಮುನಿಯಪ್ಪ

ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ…

1 hour ago

ಕನ್ನಡ ರಾಜ್ಯೋತ್ಸವ: ದೀಪಾಲಂಕಾರದಿಂದ ಕಂಗೊಳಿಸಿದ ಘಾಟಿ ಸುಬ್ರಹ್ಮಣ್ಯ ದೇವಾಲಯ

ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.…

5 hours ago

ಫಿಕ್ಸಿಂಗ್ ಮತ್ತು ದಂಧೆ…….

ಕ್ರಿಕೆಟ್ ನಲ್ಲಿ ಫಿಕ್ಸಿಂಗ್, ಕುದುರೆ ರೇಸ್ ನಲ್ಲಿ ಫಿಕ್ಸಿಂಗ್, ರಾಜಕೀಯದಲ್ಲಿ ಫಿಕ್ಸಿಂಗ್, ಸಿನಿಮಾ ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಅಕಾಡೆಮಿಗಳ ಅಧಿಕಾರ ಮತ್ತು…

5 hours ago

ರಾಂಪುರ ಮಜರ ವಡೇರಹಳ್ಳಿ ಗ್ರಾಮದ ಗ್ರಾಮಠಾಣಾ ಜಾಗ ಒತ್ತುವರಿ ತೆರವು

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿರುವ ಸುಮಾರು 2 ಎಕರೆ 10 ಗುಂಟೆ…

18 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ

ದೊಡ್ಡಬಳ್ಳಾಪುರ: ಹೊನ್ನದೇವಿಪುರ ಗೇಟ್ ಬಳಿಯ ಹಂದಿ ಫಾರಂನ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ…

1 day ago

ದೀಪಾವಳಿ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಹಸಿರು ಪಟಾಕಿ ಬಳಕೆ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಗೋದಾಮು ಮುಟ್ಟುಗೋಲು, ಕ್ರಿಮಿನಲ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ…

1 day ago