ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ….
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ಚಂದ್ರಕಾಂತ್ ಎಂ.ವಿ ಅವರು ಗುರುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿದ ನೂತನ ಎಸ್‌ಪಿಯವರನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ (ASP) ನಾಗರಾಜು ಮತ್ತು ವೆಂಕಟೇಶ್ ಪ್ರಸನ್ನ ಅವರು ಚಂದ್ರಕಾಂತ್ ಎಂ.ವಿ ಅವರಿಗೆ ಹೂಗುಚ್ಛ ನೀಡಿ, ಅಭಿನಂದನೆ ಸಲ್ಲಿಸಿ ಬರಮಾಡಿಕೊಂಡರು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ನೂತನ ಎಸ್‌ಪಿ ಚಂದ್ರಕಾಂತ್ ಎಂ.ವಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವಿವಿಧ ಘಟಕಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…
ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…
ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ…
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…