2023ರ ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ, ಮೇ 10 ರಂದು ನಡೆಯಲಿದ್ದು, 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ವಿಶೇಷವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್-SVEEP) ಚಟುವಟಿಕೆಗಳನ್ನು ಮೇ 07 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳನ್ನು ಈಗಾಗಲೇ ಗುರುತಿಸಲಾಗಿದ್ದು ಈ ಮತಗಟ್ಟೆಗಳಲ್ಲಿ ಮೇ 10 ರಂದು ನಡೆಯುವ ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಮತದಾನದ ಪ್ರಾಮುಖ್ಯತೆ, ಜಾಗೃತಿ ಮತ್ತು ಅರಿವನ್ನು ಮತದಾರರಲ್ಲಿ ಮೂಡಿಸುವುದರಿಂದ ಮತದಾನದ ಪ್ರಮಾಣ ಹೆಚ್ಚಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಮತದಾರರಿಗೂ ಮತದಾರರ ಮಾರ್ಗದರ್ಶಿ ಮತ್ತು ವೋಟರ್ ಇನ್ಫಾರ್ಮೇಶನ್ ಸ್ಲಿಪ್ ಶೇಕಡ ನೂರರಷ್ಟು ವಿತರಣೆ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಗುವುದು ಇಲ್ಲವಾದಲ್ಲಿ ಕೂಡಲೇ ಕ್ರಮ ವಹಿಸಲಾಗುವುದು.
ಪುನೀತ್ ರಾಜ್‌ಕುಮಾರ್ ಹಾಗೂ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರ ಮತದಾರರ ಜಾಗೃತಿ ಮೂಡಿಸುವ ವಿಡಿಯೋಗಳನ್ನು ಪ್ರದರ್ಶಿಸಲಾಗುವುದು.
ಮತಗಟ್ಟೆಗಳಲ್ಲಿ ಮತದಾರರಿಗೆ ಒದಗಿಸುವ ವಿಶೇಷ ಸೌಲಭ್ಯಗಳಾದ ನೆರಳಿನ ವ್ಯವಸ್ಥೆ, ಶಾಮಿಯಾನ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಶೌಚಾಲಯ, ರ್ಯಾಂಪ್ ಅಂಡ್ ರೈಲಿಂಗ್ಸ್, ಗಾಲಿ ಕುರ್ಚಿ, ಅಗತ್ಯವಿರುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಛಾಯಾಚಿತ್ರ ವಿಡಿಯೋ ಚಿತ್ರೀಕರಿಸಿ ಕಡಿಮೆ ಮತದಾನ ದಾಖಲಾದ ಕ್ಷೇತ್ರಗಳಲ್ಲಿ ಮತದಾನದ ದಿನಕ್ಕೆ ಮುಂಚಿತವಾಗಿ ಪ್ರದರ್ಶಿಸಲಾಗುವುದು.
ಮತದಾರರು ಮತದಾನ ಮಾಡುವಂತೆ ಆಕರ್ಷಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ
ತಲಾ 05 ರಂತೆ 20 ಮಹಿಳಾ(ಸಖಿ) ಮತಗಟ್ಟೆಗಳು
ತಲಾ 01 ರಂತೆ 04 ವಿಕಲಚೇತನ ಮತಗಟ್ಟೆಗಳು
ತಲಾ 01 ರಂತೆ 04 ಯುವಕರ ಮತಗಟ್ಟೆಗಳು
ತಲಾ 01 ರಂತೆ 04 ಎತ್ನಿಕ್ ಮತಗಟ್ಟೆಗಳು
ತಲಾ 01 ರಂತೆ 04 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…