
ಬೆಂ.ಗ್ರಾ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 9 ವರ್ಷಗಳಿಂದ ವಾರ್ತಾ ಸಹಾಯಕಿಯಾಗಿ ಹಾಗೂ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾವತಿ.ಜೆ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಮನಗರ ಜಿಲ್ಲೆಯ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ವರ್ಗಾವಣೆಯಾಗಿದ್ದಾರೆ.
ಬೆಂ.ಗ್ರಾ ಜಿಲ್ಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ರಾಮನಗರಕ್ಕೆ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದು ಪತ್ರಕರ್ತರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಂಪರ್ಕ ಸೇತುವೆಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಸಹಾಯಕ ಹಾಗೂ ಪ್ರಭಾರ ಸಹಾಯಕ ನಿರ್ದೇಶಕಿಯಾಗಿ ಕಳೆದ 9 ವರ್ಷಗಳಿಂದ ಕಾರ್ಯನಿರ್ವಸಿರುತ್ತೇನೆ. ಸರ್ಕಾರದ ಪ್ರತಿಯೊಂದು ಯೋಜನೆ, ಸವಲತ್ತುಗಳನ್ನು ಸುದ್ದಿಗಳ ರೂಪದಲ್ಲಿ ಪತ್ರಕರ್ತರ ಮೂಲಕ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪತ್ರಕರ್ತರು ಇಲಾಖೆಗೆ ತುಂಬಾ ಸಹಕಾರ ನೀಡಿದ್ದಾರೆ. ಕಳೆದ 9 ವರ್ಷಗಳ ಅವಧಿಯಲ್ಲಿದ್ದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನನ್ನ ಎಲ್ಲಾ ಅಧಿಕಾರಿಗಳು ನನಗೆ ತುಂಬಾ ಸಹಕಾರ ನೀಡಿದ್ದಾರೆ. ಅವರಿಗೆಲ್ಲಾ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಹೇಮಾವತಿ.ಜೆ ಅವರು ಭಾವುಕ ನುಡಿಗಳನ್ನಾಡಿದ್ದಾರೆ….