2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು(2023ರ ಏಪ್ರಿಲ್ 21 ರಂದು) ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 83.04 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 09ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಿಯುಸಿ ಪರೀಕ್ಷೆಗೆ ಹಾಜರಾದ 9988 ವಿದ್ಯಾರ್ಥಿಗಳ ಪೈಕಿ 7858 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ. 78.67 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2022-23ನೇ ಸಾಲಿನ(ಪ್ರೆಶ್) 8701 ವಿದ್ಯಾರ್ಥಿಗಳು ಹಾಜರಾಗಿದ್ದು ಈ ಪೈಕಿ 7225 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 83.04 ರಷ್ಟು ಫಲಿತಾಂಶ ದೊರಕಿದೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 4641 ಬಾಲಕರು ಹಾಜರಾಗಿದ್ದು, 3490 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 75.2 ರಷ್ಟು ಫಲಿತಾಂಶ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ಒಟ್ಟು 5347 ಬಾಲಕಿಯರು ಪೈಕಿ 4368 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ. 81.69 ರಷ್ಟು ಫಲಿತಾಂಶ ದೊರಕಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಿಂದ ಹಾಜರಾದ ಒಟ್ಟು 1487 ವಿದ್ಯಾರ್ಥಿಗಳ ಪೈಕಿ 884 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 59.45 ರಷ್ಟು ಫಲಿತಾಂಶ ಪಡೆದಿದೆ.
ವಾಣಿಜ್ಯ ವಿಭಾಗದಿಂದ ಹಾಜರಾದ ಒಟ್ಟು 5369 ವಿದ್ಯಾರ್ಥಿಗಳ ಪೈಕಿ 4211 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 78.43 ರಷ್ಟು ಫಲಿತಾಂಶ ದೊರೆತಿದೆ.
ವಿಜ್ಞಾನ ವಿಭಾಗದಿಂದ ಹಾಜರಾದ ಒಟ್ಟು 3132 ವಿದ್ಯಾರ್ಥಿಗಳ ಪೈಕಿ 2763 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 88.22 ರಷ್ಟು ಫಲಿತಾಂಶ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…