ಬೆಂ.ಗ್ರಾ.ಜಿಲ್ಲೆ: 61 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧ

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 61 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, 04 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

178-ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಣದಲ್ಲಿ 24 ಅಭ್ಯರ್ಥಿಗಳು ಉಳಿದಿದ್ದು, ಯಾವುದೇ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿಲ್ಲ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದು, ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದು, ಯಾವುದೇ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿಲ್ಲ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಣದಲ್ಲಿ 11 ಅಭ್ಯರ್ಥಿಗಳು ಉಳಿದಿದ್ದು, ಇಬ್ಬರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ.

ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *