
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ..
ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಿ ಗೃಹ ಇಲಾಖೆ ಆದೇಶ ಮಾಡಿದೆ.
ಅಪರ ಪೊಲೀಸ್ ಅಧೀಕ್ಷಕ-2 ಆಗಿದ್ದ ನಾಗರಾಜ್ ಕೆ.ಎಸ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಇತ್ತಿಚೆಗೆ ಬಿ.ಡಿ.ಎ (BDA) ಗೆ ವರ್ಗಾವಣೆಗೊಂಡಿದ್ದರು. ಅವರ ಸ್ಥಾನಕ್ಕೆ ಎ.ವಿ ಲಕ್ಷ್ಮಿನಾರಾಯಣ ಅವರನ್ನು ನೇಮಕ ಮಾಡಲಾಗಿದೆ…