ಬೆಟ್ಟಿಂಗ್ ಚಟಕ್ಕೆ ದಾಸನಾಗಿ 2.40 ಕೋಟಿ ಸಾಲ ಮಾಡಿದ್ದ ಮಗ: ಮಗ ಮಾಡಿದ್ದ ಸಾಲ‌ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಪೋಷಕರು

ಆನ್‌ಲೈನ್ ಜೂಜಾಟದ ಮೂಲಕ ತಮ್ಮ 22 ವರ್ಷದ ಮಗ ಮಾಡಿದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ವಿವಾಹಿತ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಯು.ಮಹೇಶ್ವರ ರೆಡ್ಡಿ (45) ಮತ್ತು ಅವರ ಪತ್ನಿ ಮಂಗಳವಾರ ರಾತ್ರಿ ನಂದ್ಯಾಲ ಜಿಲ್ಲೆಯ ಅಬ್ದುಲ್ಲಾಪುರಂ ಗ್ರಾಮದ ತಮ್ಮ ಜಮೀನಿನಲ್ಲಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ.

ಮಹೇಶ್ವರ್ ಮತ್ತು ಪ್ರಶಾಂತಿ ದಂಪತಿಯ ಪುತ್ರ ನಿಖಿಲ್. ಪದವಿಗಾಗಿ ಬೆಂಗಳೂರಿಗೆ ಕಳುಹಿಸಿದಾಗ ಬೆಟ್ಟಿಂಗ್ ಚಟಕ್ಕೆ ಬಿದ್ದು ₹2.40 ಕೋಟಿ ಸಾಲ ಮಾಡಿಕೊಂಡಿದ್ದಾನೆ.

ಮಗ ಮಾಡಿದ ಕೋಟ್ಯಂತರ ರೂಪಾಯಿ ಸಾಲ ತೀರಿಸಲಾಗದೆ ದಂಪತಿಗಳು ಕೀಟನಾಶಕ ಬೆರೆಸಿದ ತಂಪು ಪಾನೀಯ ಸೇವಿಸಿದ್ದಾರೆ ಎಂದು ಆತ್ಮಕೂರು ಉಪವಿಭಾಗದ ಪೊಲೀಸ್ ಅಧಿಕಾರಿ ರಾಮಾಂಜಿ ನಾಯ್ಕ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಹೇಶ್ವರ್ ರೆಡ್ಡಿ ಈಗಾಗಲೇ 2 ಕೋಟಿ ರೂಪಾಯಿ ಸಾಲವನ್ನು ತೀರಿಸಲು ತನ್ನ ಐದು ಎಕರೆ ಜಮೀನನ್ನು ಮಾರಾಟ ಮಾಡಿದ್ದರು. ಉಳಿದ ಸಾಲಗಳನ್ನು ತೀರಿಸಲು ಪಾಲಕರು ತಮ್ಮ 10 ಎಕರೆ ಜಮೀನು, ಮನೆ ಮಾರಿದರೂ ಸಾಲ ತೀರಿಸಲು ಆಗಲಿಲ್ಲ.

ಕಳೆದ ಆರು ತಿಂಗಳಿನಿಂದ, ದಂಪತಿಗಳು ಸಂಬಂಧಿಕರೊಂದಿಗೆ ವಾಸಿಸುತ್ತಿದ್ದರು, ಮಗ ಹೈದರಾಬಾದ್‌ನಲ್ಲಿ ನೆಲೆಸಿದ್ದನು.

ಸಾಲ ಕೊಟ್ಟವರ ಒತ್ತಡ ಹೆಚ್ಚಾದ ಕಾರಣ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

44 minutes ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

3 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

16 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

18 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

21 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

24 hours ago