ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…