Categories: Home

ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಈಡೇರಿಸಲು ಸಿಪಿಐಎಂ ಪಕ್ಷದಿಂದ ಪ್ರತಿಭಟನೆ

ಕೋಲಾರ: ಕಳೆದ 23 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಬೆಮೆಲ್ ಕಾರ್ಮಿಕರ ಜೊತೆ ಮಾತುಕತೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಬೆಮೆಲ್ ಆಡಳಿತ ಮಂಡಳಿಯ ವರ್ತನೆಯನ್ನು ಖಂಡಿಸಿ, ತಕ್ಷಣ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕೆಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಸೂರ‍್ಯನಾರಾಯಣ ಮಾತನಾಡಿ ಕೇಂದ್ರದ ಸರ್ಕಾರಿ ಒಡೆತನದ ಹೆಮ್ಮೆಯ ಬೆಮೆಲ್ ಕಾರ್ಖಾನೆಯಲ್ಲಿ ಪ್ರಸ್ತುತ ಖಾಯಂ ನೌಕರರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಗುತ್ತಿಗೆ ನೌಕರರೇ ಬೆಮೆಲ್‌ನ ಬಹುತೇಕ ಎಲ್ಲಾ ಉತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಬೆಮೆಲ್ ಕಾರ್ಖಾನೆಯ ವ್ಯವಹಾರ ಮತ್ತು ಲಾಭವು ಪ್ರತಿ ವರ್ಷವು ಹೆಚ್ಚಾಗುತ್ತಿದೆ ಗುತ್ತಿಗೆ ನೌಕರರಿಗೆ ಅತ್ಯಂತ ಕಡಿಮೆ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಸುಮಾರು 30 ವರ್ಷಗಳಿಂದ ದುಡಿಸಿಕೊಳ್ಳಲಾಗುತ್ತಿದೆ. ನೂರಾರು ಗುತ್ತಿಗೆ ಕಾರ್ಮಿಕರು 30 ವರ್ಷ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ಇಲ್ಲದೇ ಬರಿಗೈಲಿಯಲ್ಲಿ ಮನೆಗೆ ಕಳುಹಿಸುತ್ತಿರು ಕ್ರಮವು ಖಂಡನೀಯವಾಗಿದೆ ಎಂದು ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೆಮೆಲ್ ಆಡಳಿತ ಮಂಡಳಿಯು ಖಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ. ತಕ್ಷಣ ಬೆಮೆಲ್ ಆಡಳಿತ ಮಂಡಳಿಯು ಹೋರಾಟನಿರತ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕಳೆದ ಒಂದು ವರ್ಷದಿಂದ ಗುತ್ತಿಗೆ ನೌಕರರು ಹಲವಾರು ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರೂ ಬೆಮೆಲ್ ಆಡಳಿತ ಮಂಡಳಿಯು ಬೇಡಿಕೆಗಳನ್ನು ಈಡೇರಿಸದೇ ಕಾಲಹರಣ ಮಾಡುತ್ತಿದೆ. ಬೆಮೆಲ್ ಖಾಯಂ ಕಾರ್ಮಿಕರ ನೇಮಕಾತಿಯಲ್ಲಿ ಜಿಲ್ಲೆಯ ಯುವಕರಿಗೆ ಅಧ್ಯತೆಯನ್ನು ನೀಡದೇ ಉತ್ತರ ಭಾರತದವರಿಗೆ ವಿಶೇಷ ಅಧ್ಯತೆ ನೀಡುತ್ತಿರುವುದು ಖಂಡನೀಯ. ಅತ್ಯಂತ ಕಡಿಮೆ ವೇತನ ಸಿಗುವ ಗುತ್ತಿಗೆ ಕೆಲಸವನ್ನು ಜಿಲ್ಲೆಯವರಿಗೆ ನೀಡುತ್ತಿದ್ದಾರೆ. ಈ ವರ್ತನೆಯನ್ನು ಬದಲಿಸಿಕೊಳ್ಳದಿದ್ದರೆ ಜಿಲ್ಲೆಯ ಜನ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನಗಳಿಂದ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಜಿಲ್ಲೆಯ ಬೆಮೆಲ್ ಕಾರ್ಮಿಕರ ಹಿತ ಮುಖ್ಯವಾಗಿದ್ದು ಕೆಜಿಎಫ್ ಶಾಸಕ ರೂಪಕಲಾ ಅವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಲು ಸಮಯ ನಿಗದಿ ನಡೆಸಲಾಗುತ್ತದೆ ಅಲ್ಲಿಯೂ ಪರಿಹಾರ ಸಿಗದೆ ಹೋದರೆ ಮುಂದೆ ಬೆಂಗಳೂರಿನ ಬೆಮೆಲ್ ಕಛೇರಿ ಮುಂದೆಯೇ ಪ್ರತಿಭಟನೆ ನಡೆಸೋಣ ನಿಮ್ಮೊಂದಿಗೆ ನಾವು ಸದಾ ಸಿದ್ದ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಮುಖಂಡರಾದ ವಿ.ಗೀತಾ, ಎ.ಆರ್.ಬಾಬು, ಪಿ.ತಂಗರಾಜ್, ಎಂ.ವಿಜಯಕೃಷ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಟಿ.ಎಂ.ವೆಂಕಟೇಶ್, ಅಶೋಕ್, ಅಪ್ಪಯ್ಯಣ್ಣ, ವೀರಭದ್ರ, ಗಂಗಮ್ಮ, ಪುಣ್ಯಹಳ್ಳಿ ಶಂಕರ್, ಆನಂದರಾಜ್, ಜಯರಾಮನ್, ಆಶಾ, ಎಂ.ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

6 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

10 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

13 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

15 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago