ಬೆಳಂಬೆಳಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪ್ರದೇಶದ ನಗರಗೆರೆ ಬಳಿಯ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂವರು ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37), ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಕುಮಾರ್ ಎಂಬುವರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸದ್ಯ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಯಲ್ಲಿ ವ್ಯಕ್ತಿಯೋರ್ವನು ತಿರುವು ಕೆಳಗಿನ ಹಳ್ಳದಲ್ಲಿರುವ ಮರದ ಮೇಲೆ ನೇತಾಡುತ್ತಿದ್ದು ಎಲ್ಲರ ಕಣ್ಣಲ್ಲಿ ನೀರು ಬರುವಂತೆ ಮಾಡಿದೆ.
ಸದ್ಯ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…