Categories: ರಾಜ್ಯ

ಬೆಳಗಾವಿಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ- ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಘಟನೆ- ಈ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ- ಸಿಎಂ ಸಿದ್ದರಾಮಯ್ಯ ಗರಂ

ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು  ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಕಣ್ಣು ಮುಚ್ಚಿ ಕೂತಿದ್ದರು. ಆದರೆ ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಅವರ ಕಣ್ಣಿಗೆ ಕಂಡಿದ್ದು ಅದರಲ್ಲೂ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಅತ್ಯಂತ ಖಂಡನೀಯ. ಮನುಷ್ಯರೆಲ್ಲರೂ ತಲೆತಗ್ಗಿಸುವಂತಹ ಆ ಘಟನೆಯನ್ನು ಬಳಸಿಕೊಂಡು ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕೀಳು ಮನಸ್ಥಿತಿ ಇನ್ನೂ ಖಂಡನೀಯ ಎಂದಿದ್ದಾರೆ.

ಬೆಳಗಾವಿಯ ಘಟನೆ ಗೊತ್ತಾದ ತಕ್ಷಣವೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂತ್ರಸ್ತೆಯ ಮನೆಗೆ ಭೇಟಿಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ. ಪೊಲೀಸರು ಇಪ್ಪತ್ತನಾಲ್ಕು ಗಂಟೆಗೊಳಗೆ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ. ನಾನೇ ಖುದ್ದಾಗಿ ಈ ಪ್ರಕರಣದ ತನಿಖೆಯ ಮೇಲೆ ನಿಗಾ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯದ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ ಹೀಗಿರುವಾಗ ಘಟನೆ ನಡೆದು ನಾಲ್ಕು ದಿನಗಳನಂತರ ಇದ್ದಕ್ಕಿದ್ದ ಹಾಗೆ ಜೆ.ಪಿ.ನಡ್ಡಾ ಅವರು ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಕೆದಕಲು ಹೊರಟಿರುವುದಕ್ಕೆ ರಾಜಕೀಯ ದುರುದ್ದೇಶ ಕಾರಣವೇ ಹೊರತು ಮಹಿಳೆಯರ ಮೇಲಿನ ಕಾಳಜಿಯಿಂದ ಖಂಡಿತ ಅಲ್ಲ ಎಂದು ತಿಳಿಸಿದ್ದಾರೆ.

ನಡ್ಡಾ ಅವರು ಮಹಿಳೆಯರ ಮೇಲೆ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಮಹಿಳೆಯರ ರಕ್ಷಣೆಯಲ್ಲಿ ವಿಫಲವಾಗಿದ್ದ  ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧವೇ ಕ್ರಮ ಕೈಗೊಳ್ಳಬೇಕಾಗಿತ್ತು. ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ 17,813 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಅದರ ಹಿಂದಿನ ವರ್ಷ 2021ರಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಅವರದ್ದೇ ಸರ್ಕಾರದ ಮೂಗಿನಡಿಯಲ್ಲಿ ವರ್ಷದಿಂದ ವರ್ಷಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದ್ದದ್ದು ಗಮನಕ್ಕೆ ಬಂದಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮಣಿಪುರದಿಂದ ಗುಜರಾತ್ ವರೆಗೆ, ಉತ್ತರಪ್ರದೇಶದಿಂದ ಮಧ್ಯಪ್ರದೇಶದ ವರೆಗೆ ಎಲ್ಲೆಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನ್ಯಾಷನಲ್ ಕ್ರೈಮ್ ಬ್ಯುರೋ ವರದಿಗಳೇ ಹೇಳುತ್ತಿವೆ. ಬಿಜೆಪಿ ಸ್ವಭಾವತ: ಮಹಿಳಾ ವಿರೋಧಿ ಎನ್ನುವುದನ್ನು ಈ ಪ್ರಕರಣಗಳು ಸಾಬೀತು ಪಡಿಸಿವೆ ಎಂದರು.

ರಾಜ್ಯ ಬಿಜೆಪಿಯೊಳಗಿನ ಒಳಜಗಳ ತಾರಕಕ್ಕೇರಿದ್ದು ಪಕ್ಷದ ಮಾನಮರ್ಯಾದೆ ಬೀದಿಬೀದಿಗಳಲ್ಲಿ ಹರಾಜಾಗುತ್ತಿದೆ. ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ಪಕ್ಷದ ಹಿರಿಯ ನಾಯಕರೇ ಗಂಭೀರ ಸ್ವರೂಪದ ಆರೋಪಗಳನ್ನು ಮಾಡುತ್ತಿದ್ದಾರೆ. ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

2 hours ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

10 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 day ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

1 day ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago